ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

81 ವಿವಿಧ ಹುದ್ದೆಗೆ ಭರ್ತಿ ಮಾಡಲು ಅರ್ಜಿ ಕರೆದ ನೈಋತ್ಯ ರೈಲ್ವೆ

|
Google Oneindia Kannada News

ಬೆಂಗಳೂರು, ಜನವರಿ 15 : ನೈಋತ್ಯ ರೈಲ್ವೆ 81 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 1 ಫೆಬ್ರವರಿ 2019 ಕೊನೆಯ ದಿನವಾಗಿದೆ.

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್, ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಸೇರಿದಂತೆ 81 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ, ಆಂಧ್ರಪ್ರದೇಶ, ಗೋವಾ ಮತ್ತು ತಮಿಳುನಾಡಿನಲ್ಲಿ ಕೆಲಸ ಮಾಡಬೇಕಿದೆ.

392 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ392 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾಲ್ಕು ವರ್ಷದ ಇಂಜಿನಿಯರಿಂಗ್ ಪದವಿಯನ್ನು ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ ವ್ಯಾಸಂಗ ಮಾಡಿರಬೇಕು.

ವಿಜಯಪುರ ಕೋರ್ಟ್‌ನಲ್ಲಿ 22 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನವಿಜಯಪುರ ಕೋರ್ಟ್‌ನಲ್ಲಿ 22 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

South Western Railway recruitment 2019 : Apply for 81 Various Post

ಎಂಎಸ್‌ಸಿ ಎಲೆಕ್ಟ್ರಾನಿಕ್ಸ್ ಅಥವ ಸಬ್ ಸ್ಟ್ರೀಮ್‌ ಆಫ್ ಬೇಸಿಕ್ ಸ್ಟ್ರೀಮ್ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ ಅನ್ನು ಮಾನ್ಯತೆ ಪಡೆದ ಸಂಸ್ಥೆ, ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿರಬೇಕು.

31 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಎಸ್‌ಬಿಐ31 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಎಸ್‌ಬಿಐ

ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ನಲ್ಲಿ ಮೂರು ವರ್ಷದ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಸಬ್ ಸ್ಟ್ರೀಮ್‌ ಆಫ್ ಬೇಸಿಕ್ ಸ್ಟ್ರೀಮ್ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ ಅನ್ನು ಮಾನ್ಯತೆ ಪಡೆದ ಸಂಸ್ಥೆ, ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿರಬೇಕು.

ವಯೋಮಿತಿ : ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ 20 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್‌ ಹುದ್ದೆಗೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ : ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ 32000, ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್‌ ಹುದ್ದೆಗೆ 25000 ವೇತನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು : ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
South Western Railway recruitment 2019 notification has been released on website for the recruitment of 81 vacancies at South Western Railway. The candidate who is looking for Senior Technical Associates (STA), Junior Technical Associates (JTA) can apply online application from 10th January 2019 and before 1st February 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X