ನೈಋತ್ಯ ರೈಲ್ವೆ ನೇಮಕಾತಿ; ಮೈಸೂರಿನಲ್ಲಿ ಕೆಲಸ
ಬೆಂಗಳೂರು, ಜನವರಿ 30; ನೈಋತ್ಯ ರೈಲ್ವೆ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 1ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹುದ್ದೆಯ ಹೆಸರು Contract Meical Practitioner. ಒಟ್ಟು ಎರಡು ಹುದ್ದೆಗಳಿದ್ದು ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ. ಈ ಹುದ್ದೆಯು ತಾತ್ಕಾಲಿಕವಾಗಿದ್ದು, 2 ತಿಂಗಳ ಮಟ್ಟಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳ ವಯೋಮಿತಿ 21/1/2022ಕ್ಕೆ ಅನ್ವಯವಾಗುವಂತೆ 50 ವರ್ಷಕ್ಕಿಂತ ಹೆಚ್ಚಿರಬಾರದು. ರೈಲ್ವೆ ನಿವೃತ್ತ ವೈದ್ಯರು/ ರಾಜ್ಯ, ಕೇಂದ್ರ/ ಮೆಡಿಕಲ್ ಆಫೀಸರ್‌ಗಳಿಗೆ 21/1/2022ಕ್ಕೆ ಅನ್ವಯವಾಗುವಂತೆ 65 ವರ್ಷಗಳು.

ಆಯ್ಕೆಯಾದ ಅಭ್ಯರ್ಥಿಗಳಿಗೆ 75,000 ರೂ. ಮಾಸಿಕ ವೇತನ ನೀಡಲಾಗುತ್ತದೆ. ನಿವೃತ್ತ ವೈದ್ಯರಿಗೆ ನೇಮಕಾತಿ ನಿಯಮಗಳ ಪ್ರಕಾರ ವೇತನ ನೀಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.
ಆಸಕ್ತರು ಫೆಬ್ರವರಿ 1ರಂದು ಬೆಳಗ್ಗೆ 11 ಗಂಟೆಯಿಂದ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://swr.indianrailways.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ; ಸೀನಿಯರ್ ಡಿವಿಜನನ್ ಪರ್ಸನಲ್ ಆಫೀಸರ್ ಕಚೇರಿ, ಡಿಜಿಜನಲ್ ರೈಲ್ವೆ ಮ್ಯಾನೇಜರ್ ಕಚೇರಿ, ನೈಋತ್ಯ ರೈಲ್ವೆ, ಇರ್ವಿನ್ ರಸ್ತೆ, ಮೈಸೂರು.
ಸಮುದಾಯ ಸಂಪನ್ಮೂಲ ಹುದ್ದೆಗೆ ಅರ್ಜಿ ಹಾಕಿ; ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಕಲಬುರಗಿ ಜಿಲ್ಲೆಯ ವಾಡಿ ಪುರಸಭೆ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಕರೆದಿದೆ.
ಒಂದು ವರ್ಷದ ಅವಧಿಗೆ ಓರ್ವ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಡಿ ಪುರಸಭೆಯಲ್ಲಿ ನೋಂದಾಯಿತ ಅರ್ಹ ಸ್ವ-ಸಹಾಯ ಹಾಗೂ ಓಕ್ಕೂಟ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ಕನಿಷ್ಟ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ. ಕಂಪ್ಯೂಟರ್ ನಿರ್ವಹಣೆ ಕುರಿತು ಜ್ಞಾನ ಹೊಂದಿರಬೇಕು (ಈ ಕುರಿತು ಪ್ರಮಾಣ ಪತ್ರ ಹೊಂದಿರಬೇಕು).
ಪುರಸಭೆ ವ್ಯಾಪ್ತಿಯಲ್ಲಿ ಖಾಯಂ ನಿವಾಸಿಯಾಗಿದ್ದು, ಕನಿಷ್ಟ ವರ್ಷಗಳಿಂದ ಸ್ವ-ಸಹಾಯ ಸಂಘದಲ್ಲಿ ಸದಸ್ಯರಾಗಿರಬೇಕು. ಸರ್ಕಾರಿ, ಅರೆ-ಸರ್ಕಾರಿ, ಎನ್‌ಓಜಿಗಳಲ್ಲಿ ಉದ್ಯೋಗಸ್ಥರಾಗಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು (ಎಸ್.ಎಸ್.ಎಲ್.ಸಿ ಅಂಕಪಟ್ಟಿ ಲಗತ್ತಿಸಬೇಕು).
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.
ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ವಾಡಿ (ಜಂ) ಪುರಸಭೆ ಕಚೇರಿಯ ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಿ ಫೆಬ್ರವರಿ 14ರ ಸಂಜೆ 4.30 ರೊಳಗಾಗಿ ಆಳಂದ ಪುರಸಭೆಯ ಕಚೇರಿಯಲ್ಲಿ ದ್ವಿ-ಪ್ರತಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿ ಸ್ವೀಕರಿಸಲಾಗುವುದಿಲ್ಲ.
ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ; ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯ ಅನುಷ್ಠಾನಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹರಿಂದ ಅರ್ಜಿ ಕರೆಯಲಾಗಿದೆ.
ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದಾದಾರೂ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು, ಎಂ.ಎಸ್.ಡಬ್ಲ್ಯೂ, ಎಂ.ಎ. ವುಮೆನ್ ಸ್ಟಡೀಸ್ ವಿದ್ಯಾರ್ಹತೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ 3-5 ವರ್ಷಗಳ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 14,000 ರೂ.ಗಳ ಗೌರವಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30 ವರ್ಷ ವಯೋಮಿತಿ ಒಳಗಿನವರಾಗಿದ್ದು, ಕಂಪ್ಯೂಟರ್ ಬಳಕೆ ಬಗ್ಗೆ ಪ್ರಾವಿಣ್ಯತೆ ಹೊಂದಿರಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಾಮರ್ಥ್ಯ ಹೊಂದಿರಬೇಕು. ಅಭ್ಯರ್ಥಿಗಳು ಫೆಬ್ರವರಿ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಕಚೇರಿ ಸಂಖ್ಯೆ 080-29787445 ಸಂಪರ್ಕಿಸಬಹುದಾಗಿದೆ.












Click it and Unblock the Notifications