ಎಸ್‌ಎಸ್‌ಎಲ್‌ಸಿ ಪಾಸ್ ಆದವರಿಗೆ ನೈಋತ್ಯ ರೈಲ್ವೆಯಲ್ಲಿ ಕೆಲಸವಿದೆ
ಬೆಂಗಳೂರು, ಆಗಸ್ಟ್ 08 : ನೈಋತ್ಯ ರೈಲ್ವೆ 257 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 27, 2018 ಕೊನೆಯ ದಿನವಾಗಿದೆ.
ನೈಋತ್ಯ ರೈಲ್ವೆ Safaiwala ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ತಮಿಳುನಾಡು, ಕೇರಳ, ಪುದುಚೇರಿ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ವೇತನ ಶ್ರೇಣಿ 18000 ಪ್ರತಿ ತಿಂಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿಯನ್ನು ರಾಜ್ಯ/ಸೆಂಟ್ರಲ್ ಬೋರ್ಡ್‌ನಿಂದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಜನವರಿ 2019)ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳೆ/ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗೆ 250 ರೂ.ಗಳು.
ಸ್ಕ್ರೀನಿಂಗ್ ಟೆಸ್ಟ್ ಮತ್ತು ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications