SAI Recruitment 2023: 12 ಮೆಡಿಕಲ್ ಆಫೀಸರ್ ಹುದ್ದೆ ಖಾಲಿ, 1 ಲಕ್ಷ ರೂ. ಸಂಬಳ, ವಿವರ ತಿಳಿಯಿರಿ

ಬೆಂಗಳೂರು, ಸೆಪ್ಟಂಬರ್ 15: ಭಾರತೀಯ ಕ್ರೀಡಾ ಪ್ರಾಧಿಕಾರ (SAI) ತನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತು ಅಭ್ಯರ್ಥಿಗಳು ಮುಂದಿನ ತಿಂಗಳ ಅಕ್ಟೋಬರ್ 5ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಾಧಿಕಾರ ತಿಳಿಸಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರ (SAI)ದಲ್ಲಿ ಒಟ್ಟು 12 ಮೆಡಿಕಲ್ ಆಫೀಸರ್​​ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿ ಹುಡುಕುತ್ತಿರುವವರಿಗೆ ಇದೊಂದು ಸದಾವಕಾಶವಾಗಿದ್ದು, ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇನ್ನೂ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ವಿಧಾನ ಸೇರಿದಂತೆ ಇನ್ನಿತರ ನೇಮಕಾತಿ ಪೂರ್ಣ ವಿವರನ್ನು ಇಲ್ಲಿ ತಿಳಿಯಬಹುದು.

Sports Authority of India Recruitment 2023: SAI Invite Application For 12 Post By Eligible

ನೇಮಕಾತಿ ಪೂರ್ಣ ವಿವರ

ಸಂಸ್ಥೆ ಹೆಸರು: ಭಾರತೀಯ ಕ್ರೀಡಾ ಪ್ರಾಧಿಕಾರ

ಹುದ್ದೆ ಹೆಸರು: ಮೆಡಿಕಲ್ ಆಫೀಸರ್​​

ಖಾಲಿ ಹುದ್ದೆಗಳ ಸಂಖ್ಯೆ: 12

ಮಾಸಿಕ ವೇತನ: 1,25,000 ರೂಪಾಯಿ

ಉದ್ಯೋಗದ ಸ್ಥಳ: ಭಾರತ ಎಲ್ಲಿ ಬೇಕಾದರೂ

ಅರ್ಜಿ ಸಲ್ಲಿಕೆಗೆ ಕೊನೆ ದಿನ: ಅಕ್ಟೋಬರ್ 5

ವಿದ್ಯಾರ್ಹತೆ ಮಾಹಿತಿ

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ MBBS, ಸ್ನಾತಕೋತ್ತರ ಪದವಿ, ಡಿಎನ್​ಬಿ ಪೂರ್ಣಗೊಳಿಸಿರಬೇಕು ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ; ವಯೋಮಿತಿ ಎಷ್ಟಿರಬೇಕು?

ಅಭ್ಯರ್ಥಿಗಳ ವಯಸ್ಸು ಇದೇ ವರ್ಷ ಮುಂದಿನ ಅಕ್ಟೋಬರ್ ತಿಂಗಳ 5ಕ್ಕೆ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಇನ್ನೂ ಆಯ್ಕೆ ಆಗುವವರಿಗೆ ಮಾಸಿಕವಾಗಿ ರೂಪಾಯಿ 1,25,000 ನೀಡಲಾಗುವುದು.

Sports Authority of India Recruitment 2023: SAI Invite Application For 12 Post By Eligible

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯ ವಿವರ

ಸೂಕ್ತ ದಾಖಲೆಗಳ ಸಹಿತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆದರೆ ಅಭ್ಯರ್ಥಿಗಳಗೆ ಯಾವುದೇ ಅರ್ಜಿ ಶುಲ್ಕ ಹೇರಲಾಗಿಲ್ಲ. ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಮೊದಲು ಲಿಖಿತ ಪರೀಕ್ಷೆ ಎದುರಿಸಬೇಕು. ಅಲ್ಲಿ ಆಯ್ಕೆಯಾದವರಿಗೆ ನೇರ ಸಂದರ್ಶನ ನಡೆಯಲಿದೆ ಎಂದು ಪ್ರಾಧಿಕಾರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+