Staff Nurse Recruitment: ಜಯದೇವ ಆಸ್ಪತ್ರೆ ನೇಮಕಾತಿ; 100 ಸ್ಟಾಫ್‌ನರ್ಸ್‌ ಹುದ್ದೆ, ವೇತನ ವಿವರ

ಬೆಂಗಳೂರು, ಅಕ್ಟೋಬರ್ 11: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಸ್ಟಾಫ್‌ನರ್ಸ್ (ಶುಶ್ರೂಷಾಧಿಕಾರಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 2/11/2023 ಕೊನೆಯ ದಿನವಾಗಿದೆ.

ನೇಮಕಾತಿ ಅಧಿಸೂಚನೆಯಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸ್ಟಾಫ್‌ನರ್ಸ್ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದೆ.

Sri Jayadeva Institute Staff Nurse Recruitment Apply For 100 Post

ಸ್ಟಾಫ್‌ನರ್ಸ್ (ಶುಶ್ರೂಷಾಧಿಕಾರಿ) ಉಳಿಕೆ ಮೂಲ ವೃಂದ ಹುದ್ದೆಗಳು 92, ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳು 8 ಸೇರಿ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 33,450-62,600 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಪಿಂಚಣಿ ಸೌಲಭ್ಯವು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ (ಎಸ್‌ಪಿಎಲ್) 04 ಪಿಇಟಿ 2005, ದಿನಾಂಕ: 31/03/2006 ರಂತೆ.

ಅರ್ಜಿ ಸಲ್ಲಿಕೆ ಮಾಡುವವರು Staff Nurse (Nursing Officer) Should be registered nurse with certificate of nursing recognized by the nursing council.

ವಯೋಮಿತಿ, ಅರ್ಜಿ ಶುಲ್ಕದ ವಿವರ; ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.

ನೇಮಕಾತಿಯ ಗರಿಷ್ಟ ವಯೋಮಿತಿಯನ್ನು ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು, ಎನ್.ಸಿ.ಸಿ. ಪರಿವೀಕ್ಷಕರು, ಗ್ರಾಮ ಸಮೂಹ ಪರಿಶೀಲಕರು, ಜೀತ ಕಾರ್ಮಿಕರು, ಜನಗಣತಿ ಮತ್ತು ವಿಧವೆ ಅಭ್ಯರ್ಥಿಗಳಿಗೆ ಗರಿಷ್ಟ ಐದು ವರ್ಷಗಳ ಸಡಿಲಿಕೆ ನೀಡಲಾಗುವುದು. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 6ರಲ್ಲಿ ನಿಗದಿಪಡಿಸಿರುವಂತೆ ನಿಗದಿತ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯಲ್ಲಿ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ (ಪ್ರವರ್ಗ 2ಎ/ 2ಬಿ/ 3ಎ/ 3ಬಿ) ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು ರೂ. 500 ಶುಲ್ಕವನ್ನು ಪಾವತಿ ಮಾಡಬೇಕಿದೆ. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ. ಶುಲ್ಕ ಪಾವತಿಗೆ ಕೊನೆಯ ದಿನಾಂಕ 4/11/2023.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಫ್‌ಲೈನ್ ಒಎಂಆರ್ ಮಾದರಿಯಲ್ಲಿ ನಡೆಸಲಾಗುತ್ತದೆ. ಬೆಂಗಳೂರಿನ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಪತ್ರಿಕೆಗಳ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗುತ್ತದೆ. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ನೀಡಲಾಗುತ್ತದೆ.

ಮೀಸಲಾತಿ ವಿವರ; ಅನುಚ್ಛೇದ 371 (ಜೆ) ರಂತೆ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾತಿ ಇರುತ್ತದೆ. ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು 2013ಕ್ಕೆ ಸಂಬಂಧಿಸಿದಂತೆ ನೇರ ನೇಮಕಾತಿಯಲ್ಲಿ ಸ್ಥಳೀಯ ವ್ಯಕ್ತಿಯೆಂಬ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಅನುಬಂಧ-ಎ ಯಲ್ಲಿರುವ ನಮೂನೆಯಲ್ಲಿಯೇ ಅರ್ಹತಾ ಪ್ರಮಾಣಪತ್ರವನ್ನು ಸಕ್ಷಮ ಪ್ರಾಧಿಕಾರವಾದ ಸಂಬಂಧಪಟ್ಟ ಉಪ ವಿಭಾಗದ ಸಹಾಯಕ ಆಯುಕ್ತರಿಂದ ಪಡೆದಿಟ್ಟುಕೊಳ್ಳತಕ್ಕದ್ದು.

ಮೂಲ ದಾಖಲಾತಿಗಳ ಪರಿಶೀಲನಾ ಸಮಯದಲ್ಲಿ ಈ ಪ್ರಮಾಣ ಪತ್ರದ ಮೂಲ ಪ್ರತಿಯನ್ನು ಪರಿಶೀಲನೆಗೆ ತಪ್ಪದೇ ಹಾಜರುಪಡಿಸತಕ್ಕದ್ದು, ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳ ಮೀಸಲಾತಿಯನ್ನು ರದ್ದುಪಡಿಸಿ ಅವರ ಅಭ್ಯರ್ಥಿತನವನ್ನು ಸದರಿ ಮೀಸಲಾತಿಯಡಿ ಪರಿಗಣಿಸಲಾಗುವುದಿಲ್ಲ. ಈ ಪ್ರಮಾಣ ಪತ್ರದ ನಮೂನೆಯನ್ನು ಈ ಅಧಿಸೂಚನೆಯ ಕೊನೆಯಲ್ಲಿ ತೋರಿಸಲಾಗಿದೆ. ಈ ನಮೂನೆಯನ್ನು ಹೊರತುಪಡಿಸಿ ಇತರೆ ಯಾವುದೇ ನಮೂನೆಗಳಲ್ಲಿ ಪಡೆಯಲಾದ ಅರ್ಹತಾ ಪ್ರಮಾಣ ಪತ್ರವನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ಅದರ ಒಂದು ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಮತ್ತು ಶುಲ್ಕ ಪಾವತಿಯ ಚಲನ್ ಅನ್ನು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ಭದ್ರವಾಗಿ ತಮ್ಮ ಬಳಿ ಇಟ್ಟುಕೊಳ್ಳತಕ್ಕದ್ದು.

ಈಗಾಗಲೇ ಸೇವೆಯಲ್ಲಿರುವ/ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಅವರುಗಳ ನೇಮಕಾತಿ ಪ್ರಾಧಿಕಾರಿಗಳಿಂದ ನಿಗದಿತ ನಮೂನೆಯಲ್ಲಿ ಅನುಮತಿಯನ್ನು/ ಸೇವಾ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು ಹಾಗೂ ಸೇವಾ ವಿವರಗಳನ್ನು ಅರ್ಜಿಯಲ್ಲಿ ನಮೂದಿಸಬೇಕು. ಮೂಲ ದಾಖಲಾತಿಯ ಪರಿಶೀಲನೆಯ ಸಮಯದಲ್ಲಿ ಮೂಲ ನಿರಾಕ್ಷೇಪಣೆ/ ಸೇವಾ ಪ್ರಮಾಣ ಪತ್ರವನ್ನು ಹಾಜರುಪಡಿಸತಕ್ಕದ್ದು (ಕ್ರೋಢೀಕೃತ ನಿರಾಕ್ಷೇಪಣೆ ಪ್ರಮಾಣ ಪತ್ರ ಪಡೆದಂತ ಅಭ್ಯರ್ಥಿಗಳು ಈ ಎನ್.ಒ.ಸಿ ರಲ್ಲಿ ಅವರ ನೇಮಕಾತಿ ಪ್ರಾಧಿಕಾರದ ದೃಢೀಕರಣ ಮತ್ತು ಮೊಹರು ಪಡೆದುಕೊಂಡು ಸಲ್ಲಿಸಬೇಕು). ತಪ್ಪಿದ್ದಲ್ಲಿ ಅನರ್ಹಗೊಳಿಸಲಾಗುವುದು.

ಶುಲ್ಕ ಪಾವತಿಸಲು ಕೊನೆಯ ದಿನಾಂಕವು ಸಾರ್ವತ್ರಿಕ ರಜಾ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನಾಂಕದ ಮಾರನೆಯ ಕೆಲಸದ ದಿನವು ಕೊನೆಯ ದಿನಾಂಕವಾಗುವುದು. ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಮತ್ತು ಸರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಮಾತ್ರಕ್ಕೆ ಅಭ್ಯರ್ಥಿಗಳಿಗೆ ಈ ಮೇಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ, ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಆರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.

ಯಾವುದೇ ನಿಯಮಗಳು/ ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ವ್ಯತ್ಯಾಸ ಅಥವಾ ಅಸ್ಪಷ್ಟತೆ ಕಂಡು ಬಂದಲ್ಲಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 / ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 (ತಿದ್ದುಪಡಿಗಳು) ರಲ್ಲಿರುವಂತೆ ಅನ್ವಯಿಸುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. ಕೇಂದ್ರ ಕಛೇರಿಯ ಮಾಹಿತಿ ಕೇಂದ್ರ 080-23460460.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+