181 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಸಶಸ್ತ್ರ ಸೀಮಾ ಬಲ

ಬೆಂಗಳೂರು, ಆಗಸ್ಟ್ 28 : ಎಸ್‌ಎಸ್‌ಬಿ 181 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 10 ಸೆಪ್ಟೆಂಬರ್ 2018 ಕೊನೆಯ ದಿನವಾಗಿದೆ.

ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಸ್ಟಾಫ್‌ ನರ್ಸ್‌, ಹೆಡ್ ಕಾನ್ಸ್‌ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಸ್ಟಾಫ್‌ ನರ್ಸ್ (ಮಹಿಳೆ) 23, ಹೆಡ್ ಕಾನ್ಸ್‌ಟೇಬಲ್ 74, ಎಎಸ್ಐ (ಫಾರ್ಮಿಸ್ಟ್) 18, ಎಎಸ್‌ಐ (ಆಪರೇಷನ್ ಥಿಯೇಟರ್ ಟೆಕ್ನಿಷಿಯನ್) 2, ಎಎಸ್‌ಐ (ಡೆಂಟಲ್ ಟೆಕ್ನಿಷಿಯನ್) 2, ಎಎಸ್‌ಐ (ರೆಡಿಯೋಗ್ರಾಫರ್) 8, ಎಎಸ್ಐ (ಸ್ಟೆನೋಗ್ರಾಫರ್) 54 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

SSB recruitment 2018 : Apply for 181 Various Vacancies

ಎಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸುವವರು 10+2 ಅಥವ ತತ್ಸಮಾನ ಪರೀಕ್ಷೆಯಲ್ಲಿ ವಿಜ್ಞಾನ ವಿಷಯದೊಂದಿಗೆ ತೇರ್ಗಡೆಯಾಗಿರಬೇಕು. ಜನರಲ್ ನರ್ಸಿಂಗ್‌ನಲ್ಲಿ ಡಿಪ್ಲೊಮಾ ಪದವಿಯನ್ನು ಮಾನ್ಯತೆ ಪಡೆದ ರಾಜ್ಯ ಅಥವ ಕೇಂದ್ರ ಸರ್ಕಾರದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು. ಎರಡು ವರ್ಷ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಇಂಟರ್ ಮೀಡಿಯಟ್ ಅಥವ 10+2 ಪರೀಕ್ಷೆಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರಗಳು : ಎಎಸ್ಐ ಹುದ್ದೆಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ 15 ರಿಂದ 25 ವರ್ಷಗಳು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ : ಎಎಸ್‌ಐ ಹುದ್ದೆ 35400 ಪ್ರತಿ ತಿಂಗಳು, ಹೆಡ್ ಕಾನ್ಸ್‌ಟೇಬಲ್ 25500 ಪ್ರತಿ ತಿಂಗಳು.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ ಶುಲ್ಕವಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+