ಸ್ಟಾಫ್ ಸೆಲೆಕ್ಷನ್ ಕಮಿಷನ್: 6506 ವಿವಿಧ ಹುದ್ದೆಗಳಿವೆ
ನವದೆಹಲಿ, ಡಿ. 30: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟಿಸಿದೆ. ವಿವಿಧ ಅಧಿಕಾರಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಜನವರಿ 31, 2021ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Staff Selection Commission(SSC)
ಹುದ್ದೆ ಹೆಸರು: ಸಹಾಯಕ, ಆಫೀಸರ್ ಇನ್ನಿತರ.
ಒಟ್ಟು ಹುದ್ದೆ: 6506
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 31, 2021
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ, ಸಿಎ ಅಥವಾ ಎಂಬಿಎ.
ವಯೋಮಿತಿ: 18 ರಿಂದ 32 ವರ್ಷ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿ 5 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇರಲಿದೆ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ
ಒಬಿಸಿ/ಇತರೆ: 100ರು
ನೇಮಕಾತಿ: ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29-12-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-01-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ