ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSC ನೇಮಕಾತಿ 2022: CGL ಗ್ರೂಪ್ ಬಿ ಹಾಗೂ ಸಿ ಹುದ್ದೆಗಳಿವೆ

|
Google Oneindia Kannada News

ನವದೆಹಲಿ, ಸೆ.19: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2022ನೇ ಸಾಲಿನ ನೇಮಕಾತಿ ಆರಂಭಿಸಿದೆ. ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟಿಸಿದೆ. ವಿವಿಧ ಅಧಿಕಾರಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಅಕ್ಟೋಬರ್ 10, 2022ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Staff Selection Commission(SSC)
ಹುದ್ದೆ ಹೆಸರು: Group B and C posts
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 10, 2022

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ, ಸಿಎ ಅಥವಾ ಎಂಬಿಎ.

ಅಸಿಸ್ಟೆಂಟ್ ಆಡಿಟ್ ಆಫೀಸರ್/ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಅಭ್ಯರ್ಥಿಯು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

KKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳುKKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳು

ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಯು 12 ನೇ ತರಗತಿಯ ಮಟ್ಟದಲ್ಲಿ ಗಣಿತದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

SSC CGL Recruitment 2022 apply for Group B and C posts

Statistical ಇನ್ವೆಸ್ಟಿಗೇಟರ್ ಗ್ರೇಡ್-II: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಅಂಕಿಅಂಶಗಳೊಂದಿಗೆ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಪದವಿ ಕೋರ್ಸ್‌ನ ಎಲ್ಲಾ ಮೂರು ವರ್ಷಗಳು ಅಥವಾ ಎಲ್ಲಾ 6 ಸೆಮಿಸ್ಟರ್‌ಗಳಿಗೆ ಅಂಕಿ ಅಂಶಗಳನ್ನು ಒಂದು ವಿಷಯವಾಗಿ ಅಧ್ಯಯನ ಮಾಡಿರಬೇಕು.

ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸಹಾಯಕ: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ ಸಂಶೋಧನಾ ಸಹಾಯಕ: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

KSP Recruitment 2022: 3484 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿವೆKSP Recruitment 2022: 3484 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿವೆ

ವಯೋಮಿತಿ: 18 ರಿಂದ 32 ವರ್ಷ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿ 5 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇರಲಿದೆ.

ಅಸಿಸ್ಟೆಂಟ್ ಆಡಿಟ್ ಆಫೀಸರ್/ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್: ಗರಿಷ್ಠ 30 ವರ್ಷ
ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್: ಗರಿಷ್ಠ 32 ವರ್ಷ
Statistical ಇನ್ವೆಸ್ಟಿಗೇಟರ್ ಗ್ರೇಡ್-II: ಗರಿಷ್ಠ 30 ವರ್ಷ
ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸಹಾಯಕ: 27 ವರ್ಷ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ ಸಂಶೋಧನಾ ಸಹಾಯಕ: 27 ವರ್ಷ

ವೇತನ ಶ್ರೇಣಿ ವಿವರ:

ಅಸಿಸ್ಟೆಂಟ್ ಆಡಿಟ್ ಆಫೀಸರ್/ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್: 47,600 ರು ನಿಂದ 1,51,100
ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್: 35,400 ರು ನಿಂದ 1,12,400
Statistical ಇನ್ವೆಸ್ಟಿಗೇಟರ್ ಗ್ರೇಡ್-II: 35,400 ರು ನಿಂದ 1,12,400
ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸಹಾಯಕ: 25500 ರು ನಿಂದ 81100 ರು
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ ಸಂಶೋಧನಾ ಸಹಾಯಕ: 25500 ರು ನಿಂದ 81100 ರು

FCI ನೇಮಕಾತಿ 2022: 5043 ಹುದ್ದೆಗಳಿವೆ, ತಕ್ಷಣವೇ ಅರ್ಜಿ ಹಾಕಿFCI ನೇಮಕಾತಿ 2022: 5043 ಹುದ್ದೆಗಳಿವೆ, ತಕ್ಷಣವೇ ಅರ್ಜಿ ಹಾಕಿ

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ
ಒಬಿಸಿ/ಇತರೆ: 100ರು

ನೇಮಕಾತಿ: ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19/09/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 08/10/2022

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ

English summary
SSC CGL recruitment 2022 notification has been released on official website for the recruitment of Group B and C posts at Staff Selection Commission (SSC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X