Govt Job Alert 2026: ಎಸ್ಎಸ್ಸಿ ಜಿಡಿ 25,487 ಹುದ್ದೆಗಳ ನೇಮಕಾತಿ, SSLC ಪಾಸಾದವರಿಗೂ ಅವಕಾಶ
Govt Recruitment 2026: ಸರ್ಕಾರಿ ಉದ್ಯೋಗ ಪಡೆಯಲು ಮಹದಾಸೆ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಕರ್ನಾಟಕ ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಖಾಲಿ ಇರುವ ಒಟ್ಟು 25,487 ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ 2026 ಜನವರಿ 01 ಕೊನೆಯ ದಿನವಾಗಿದೆ.
ಎಸ್ಎಸ್ಎಲ್ಸಿ ಪಾಸಾದವರು ಸಹ ಈ ಹುದ್ದೆಗಳಿಗೆ ಸೇರಿ ಕೈ ತುಂಬ ಸಂಪಾದನೆ ಮಾಡಬಹುದಾಗಿದೆ. ಏಳನೇ ವೇತನ ಆಯೋಗದ ಮೂರನೇ ಹಂತದ ವೇತನ ಶ್ರೇಣಿ ಈ ಹುದ್ದೆಗಳಿಗೆ ನಿಗದಿಪಡಿಸಲಾಗಿದೆ. ವಿದ್ಯಾರ್ಹತೆ, ಮಾಸಿಕ ವೇತನ, ಆಯ್ಕೆ ಇತರ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ಇತರ ವಿವರ
ಬಿಎಸ್ಎಫ್ : 524 (ಪುರುಷ ಹುದ್ದೆ), 92 (ಮಹಿಳೆ ಹುದ್ದೆ)
ಸಿಐಎಸ್ಎಫ್ : 13,135 (ಪುರುಷ), 627 (ಮಹಿಳೆ)
ಸಿಆರ್ಪಿಎಫ್: 5366 (ಪುರುಷ), 5490 (ಮಹಿಳೆ)
ಎಸ್ಎಸ್ಬಿ : 1764 (ಪುರುಷ), 00 (ಮಹಿಳೆ)
ಐಟಿಬಿಪಿ: 1099 (ಪುರುಷ), 194 (ಮಹಿಳೆ)
ಅಸ್ಸಾಂ ರೈಫಲ್ಸ್ (ಎಂಆರ್) : 1556 (ಪುರುಷ), 150 (ಮಹಿಳೆ)
ವಿಶೇಷ ಭದ್ರತಾ ಪಡೆ (ಎಸ್ಎಸ್ಎಫ್) : 23,00 (ಪುರುಷ), 00 (ಮಹಿಳೆ)
ಲಿಂಗವಾರು ಹುದ್ದೆಗಳು : 23,467 (ಪುರುಷ), 2020 (ಮಹಿಳೆ)
ಒಟ್ಟು ಹುದ್ದೆಗಳು 25,487
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಎಸ್ಎಸ್ಎಲ್ಸಿ ಉತ್ತೀರ್ಣವಾಗಿರಬೇಕು.
ಲಿಖಿತ ಪರೀಕ್ಷೆ ಮೂಲಕ ಆಯ್ಕೆ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕೈಗೊಳ್ಳಲಾಗುತ್ತದೆ. ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲೂ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇದೆ. ಅಲ್ಲಿ ಆಯ್ಕೆ ಆದವರು ಮುಂದಿನ ಹಂತಕ್ಕೆ ತಲುಪುತ್ತಾರೆ.
ಮಾಸಿಕ ವೇತನ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಳಿಕ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ 21,700 ರೂಪಾಯಿಯಿಂದ 69,100 ರೂಪಾಯಿ ಸಿಗಲಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಎಸ್ಎಸ್ಸಿ ಪೋರ್ಟ್ಲ್ನಲ್ಲಿ ಒಂದು ಬಾರಿಯ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಆನ್ಲೈನ್ (https://ssc.gov.in/) ಮೂಲಕವೇ ಅರ್ಜಿ ಭರ್ತಿ ಮಾಡಬೇಕು. ಆಧಾರ್ ಸಂಖ್ಯೆ ಬಳಸಿ ಅರ್ಜಿ ಸಲ್ಲಿಸಿದಲ್ಲಿ ಫೋಟೋ ಕಾರಣಕ್ಕೆ ಅರ್ಜಿ ತಿರಸ್ಕೃತಗೊಳ್ಳುವ ಹಾಗು ಪರೀಕ್ಷಾ ಕೇಂದ್ರಕ್ಕೆ ಭಾವಚಿತ್ರದ ಗುರುತಿನ ಚೀಟಿ ಹಾಜರುಪಡಿಸುವ ಅಗತ್ಯವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಮಾಹಿತಿ
ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಶಿವಮೊಗ್ಗ ಮತ್ತು ಉಡುಪಿ ಕೇಂದ್ರಗಳಲ್ಲಿ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗಳು ನಡೆಯಲಿವೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ









Click it and Unblock the Notifications