ಖಾಲಿ ಹುದ್ದೆ ನೇಮಕಾತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 25 : ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್ ಎಸ್ ಸಿ) ಭಾರತದಾದ್ಯಂತ ವಿವಿಧ ಕಚೇರಿಯಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ ಗ್ರೂಪ್ 'ಬಿ' ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.
ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ನವೆಂಬರ್ 17, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: Junior Engineer Group-B
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 35400 ರಿಂದ 112400 ರು. ತಿಂಗಳಿಗೆ.
ವಿದ್ಯಾರ್ಹತೆ: ಯುಜಿಸಿಯ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯಂರಿಂಗ್ ಪೂರ್ಣಗೊಳಿಸರಬೇಕು, ಅಥವಾ ಡಿಪ್ಲೊಮಾನಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯಂರಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಲು ಅರ್ಹರಾಗಿರುತ್ತಾರೆ.
ವಯೋಮಿತಿ: 01.08.2018ಕ್ಕೆ ಅನ್ವಯವಾಗುವಂತೆ ಗರಿಷ್ಠ 32ಮ ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷ ಹಾಗೂ ಮೂಲಕ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇನ್ನೂ ಇದರ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications