1136 ಹುದ್ದೆ ಭರ್ತಿ ಮಾಡಲಿದೆ ಎಸ್‌ಎಸ್‌ಸಿ, ಪದವೀಧರರು ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 14 : ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) 1,136 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30, 2018 ಕೊನೆಯ ದಿನವಾಗಿದೆ.
ಜ್ಯೂನಿಯರ್ ಇಂಜಿನಿಯರ್, ಸೈಂಟಿಫಿಕ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಪದವೀಧರರಾದ ಯಾವುದೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 9,300 ರಿಂದ 34,800 ರೂ. ವೇತನ ಪ್ರತಿ ತಿಂಗಳು ನಿಗದಿ ಪಡಿಸಲಾಗಿದೆ. ವಯೋಮಿತಿ ಸಿಬ್ಬಂದಿ ಆಯ್ಕೆ ಆಯೋಗದ ನಿಯಮಾವಳಿಗೆ ಒಳಪಟ್ಟಿರುತ್ತದೆ.

ಅರ್ಜಿ ಸಲ್ಲಿಸು ಅಭ್ಯರ್ಥಿಗಳಿಗೆ 100 ರೂ. ವೇತನ ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications