ಎಸ್‌ಎಸ್‌ಸಿ ನೇಮಕಾತಿ; 283 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಜುಲೈ 03 : ಸಿಬ್ಬಂದಿ ನೇಮಕಾತಿ ಆಯೋಗ 283 ಜ್ಯುನಿಯರ್ ಹಿಂದಿ ಟ್ರಾನ್ಸ್‌ಲೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 25/7/2020 ಕೊನೆಯ ದಿನವಾಗಿದೆ.
Recommended Video
ಕಿರಿಯ ಹಿಂದಿ ಭಾಷಾಂತರಕಾರ 283 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಷ್ಠ, 30 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/7/2020 ಕೊನೆಯ ದಿನವಾಗಿದೆ.
ಪ್ರಮುಖ ಮಾಹಿತಿ
* ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ನೇಮಕಾತಿ
* ಜ್ಯೂನಿಯರ್ ಹಿಂದಿ ಭಾಷಾಂತರಗಾರ
* ಭಾರತದಲ್ಲಿ ಕೆಲಸ
* 25/7/2020 ಅರ್ಜಿ ಹಾಕಲು ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications