SSC Recruitment 2023: ಬರೋಬ್ಬರಿ 75,000 ಹುದ್ದೆಗಳ ನೇಮಕಾತಿ, ಅಧಿಸೂಚನೆ, ಆಯ್ಕೆ, ವೇತನದ ಮಾಹಿತಿ

ಬೆಂಗಳೂರು, ನವೆಂಬರ್ 21: ಕೇಂದ್ರ ಸರ್ಕಾರಿ ವ್ಯಾಪ್ತಿಯ ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC) ಬರೋಬ್ಬರಿ ಅರ್ಧ ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಇದೇ ವರ್ಷ ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರು ಅಧಿಸೂಚನೆ ನೋಡಿಕೊಂಡು ಅರ್ಜಿ ಸಲ್ಲಿಸಬೇಕಿದೆ.

ಹೌದು, ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC) ಬರೊಬ್ಬರಿ 75,768 ಹುದ್ದೆಗಳ ನೇಮಕಕ್ಕೆ ನಿರ್ಧರಿಸಿದೆ. ಈ ಸಂಬಂಧ ಇದೇ ನವೆಂಬರ್ 24ರಂದು ಅಧಿಸೂಚನೆ ಹೊರಡಿಸಲಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 24ರ ನಂತರ ಡಿಸೆಂಬರ್ 28ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಎಸ್‌ಎಸ್‌ಸಿ ತಿಳಿಸಿದೆ.

Staff Selection Commission 75,768 Posts Recruitment 2023, Check Last Date, Apply Details

ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡಿರಬೇಕು. ಅಭ್ಯರ್ಥಿಗಳು ಆಗಸ್ಟ್ 1ಕ್ಕೆ ಸರಿಯಾಗಿ ಕನಿಷ್ಠ 18ರಿಂದ ಗರಿಷ್ಠ 23 ವಯಸ್ಸಿನವರು ಮಾತ್ರವೇ ಈ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ-ವೇತನ ಮಾಹಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ಪರೀಕ್ಷೆಗಳನ್ನು ಆಯೋಜಿಸುವ ಮೂಲಕ ಸಂಸ್ಥೆ ಆಯಾ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಇಲ್ಲಿ ಆಯ್ಕೆ ಆಗುವವರಿಗೆ ಮಾಸಿಕ ಗರಿಷ್ಟ 69,000 ರೂಪಾಯಿ ವರೆಗೆ ಮಾಸಿಕ ವೇತನ ಸಿಗಲಿದೆ.

Staff Selection Commission 75,768 Posts Recruitment 2023, Check Last Date, Apply Details

ನಿರುದ್ಯೋಗಿಗಳು ಮತ್ತು ಸರ್ಕಾರಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ಜೊತೆಗೆ ಅಧಿಸೂಚನೆ ಹೊರಬೀಳುತ್ತಿದ್ದಂತೆ ಅದನ್ನು ಪೂರ್ಣ ಓದಿಕೊಂಡು ಸೂಕ್ತ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಬೇಕು ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+