477 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ
ಬೆಂಗಳೂರು, ಸೆಪ್ಟೆಂಬರ್ 19 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 477 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ.
ಎಸ್‌ಬಿಐ ಡೆವಲಪರ್, ಸಿಸ್ಟಮ್ ಅಥವ ಸರ್ವರ್ ಅಡ್ಮಿನಿಸ್ಟ್ರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧವಿರಬೇಕಿದೆ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿಲ್ಲ. ಎಸ್‌ಬಿಐ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ತಮ್ಮ ಸರಿಯಾದ ಇ-ಮೇಲ್ ವಿಳಾಸ ಮತ್ತು ಮೊಬೈಲ್ ನಂಬರ್ ನಮೂದಿಸಬೇಕು. ಅರ್ಜಿ ವಿಲೇವಾರಿ, ಪರೀಕ್ಷಾ ದಿನಾಂಕದ ವಿವರಗಳನ್ನು ಮೊಬೈಲ್‌ಗೆ ಸಂದೇಶ ಕಳಿಸಲಾಗುತ್ತದೆ.

ಯಾವ-ಯಾವ ಹುದ್ದೆಗಳು
ಡೆವಲಪರ್ 147, ಸಿಸ್ಟಮ್ ಅಥವ ಸರ್ವರ್ ಅಡ್ಮಿನಿಸ್ಟ್ರೇಟರ್ 47, ಕ್ಲೌಡ್ ಅಡ್ಮಿನಿಸ್ಟ್ರೇಟರ್ 15, ನೆಟ್‌ವರ್ಕ್ ಇಂಜಿನಿಯರ್ 14, ಟೆಸ್ಟರ್ 4, ಐಟಿ ಸೆಕ್ಯೂರಿಟಿ ಎಕ್ಸ್‌ಪರ್ಟ್ 15 ಸೇರಿದಂತೆ 477 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಿದ್ಯಾರ್ಹತೆಯ ವಿವರಗಳು
ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಸಿಎ, ಎಂಎಸ್‌ಸಿ, ಪದವಿ, ಬಿಇ, ಬಿಟೆಕ್ ಪೂರೈಸಿರಬೇಕು. ವೆಬ್‌ಸೈಟ್‌ನಲ್ಲಿ ಆಯಾ ಹುದ್ದೆಗೆ ನಿಗದಿಪಡಿಸಿದ ವೇತನ, ವಿದ್ಯಾರ್ಹತೆ ವಿವರಗಳನ್ನು ನೀಡಲಾಗಿದೆ.

ವಯೋಮಿತಿ ವಿವರಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು
ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ, ಪಂಗಡ/ ಅಂಗವಿಕಲ ಅಭ್ಯರ್ಥಿಗಳು 125 ರೂ., ಇತರೆ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ.












Click it and Unblock the Notifications