ಕೋಲಾರದವರಿಗೆ ಗೋಲ್ಡನ್ ಚಾನ್ಸ್; PUC, ಡಿಪ್ಲೊಮಾ ಪಾಸಾದವರಿಗೆ ಸರ್ಕಾರಿ ಉದ್ಯೋಗ!
ಕೋಲಾರ, ಜುಲೈ 01: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಚೇರಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಚೇರಿಯಲ್ಲಿ ಒಟ್ಟು ಒಂದು ಹಿರಿಯ ಕ್ಷಯರೋಗ ಪ್ರಯೋಗಾಲಯ ಮೇಲ್ವಿಚಾರಕ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 10, 2023ರಂದು ಕೋಲಾರದಲ್ಲಿ ಸಂದರ್ಶನ ನಡೆಯಲಿದೆ.
ಇನ್ನೂ ಈ ಹುದ್ದೆಗೆಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೋಲಾರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನೂ ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಮಾಹಿತಿಯನ್ನ ಈ ಕೆಳಗಿನಂತೆ ನೀಡಲಾಗಿದೆ.

ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಿರಿಯ ಕ್ಷಯರೋಗ ಪ್ರಯೋಗಾಲಯ ಮೇಲ್ವಿಚಾರಕರ 1 ಹುದ್ದೆ ಖಾಲಿ ಇದ್ದು, ಈ ಹುದ್ದೆಯ ತಿಂಗಳ ವೇತನ 21000 ರೂಪಾಯಿ, ಇನ್ನೂ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಇನ್ನೂ ಕೋಲಾರ ಜಿಲ್ಲೆಯ K.N.T.B ಸ್ಯಾನಿಟೋರಿಯಂ ಆಸ್ಪತ್ರೆ ಆವರಣ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ.












Click it and Unblock the Notifications