ರಾಜ್ಯ ಮಟ್ಟದ ಉದ್ಯೋಗ ಮೇಳ; ದಿನಾಂಕ, ನೋಂದಣಿ ವಿವರ

ಬೆಂಗಳೂರು, ಜನವರಿ 31: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಸುವ ಸೂಚನೆಯನ್ನು ನೀಡಿದ್ದರು. ಈಗ ಉದ್ಯೋಗ ಮೇಳಕ್ಕೆ ದಿನಾಂಕ ನಿಗದಿಯಾಗಿದ್ದು, ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ.

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 ಆಯೋಜನೆ ಮಾಡುತ್ತಿದೆ. 'ಯುವ ಸಮೃದ್ಧಿ ಸಮ್ಮೇಳನ' ಎಂಬ ಹೆಸರಿನಲ್ಲಿ ಫೆಬ್ರವರಿ 26 ಮತ್ತು 27ರಂದು ಉದ್ಯೋಗ ಮೇಳ ನಡೆಯಲಿದ್ದು, ನೋಂದಣಿ ಪ್ರಾರಂಭವಾಗಿದೆ.

State Level Job Fair Bengaluru February 19 And 20 Register Now

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ನೀಡಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು, ಉದ್ಯೋಗದಾತರು ಆನ್‌ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಯುವನಿಧಿ ಕಾರ್ಯಕ್ರಮದ ಬಳಿಕ ರಾಜ್ಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡುವ ಕುರಿತು ಮಾತನಾಡಿದ್ದರು. ಅಲ್ಲದೇ ಇದಕ್ಕಾಗಿ ಸಚಿವರು ನೇತೃತ್ವದಲ್ಲಿ ಸಮಿತಿಯನ್ನು ಸಹ ರಚನೆ ಮಾಡಲಾಗಿತ್ತು. ಈಗ ಉದ್ಯೋಗ ಮೇಳಕ್ಕೆ ದಿನಾಂಕ ಮತ್ತು ಸ್ಥಳ ನಿಗದಿ ಮಾಡಲಾಗಿದೆ. ಎಲ್ಲಾ ವಿದ್ಯಾರ್ಹತೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

ನೋಂದಣಿ ಮಾಡಿಕೊಳ್ಳುವುದು ಹೇಗೆ?; ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು https://skillconnect.kaushalkar.com/ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಉದ್ಯೋಗದಾತರು ಸಹ ಇದೇ ವೆಬ್‌ಸೈಟ್‌ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ.

ಅಭ್ಯರ್ಥಿಗಳು ಮೊದಲ ಹಂತದಲ್ಲಿ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. 2ನೇ ಹಂತದಲ್ಲಿ ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಬೇಕು. 3ನೇ ಹಂತದಲ್ಲಿ ಉದ್ಯೋಗ ಮೇಳದ ಮೇಲೆ ಕ್ಲಿಕ್ ಮಾಡಿ, 4ನೇ ಹಂತದಲ್ಲಿ ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ, 5ನೇ ಹಂತದಲ್ಲಿ ಅರ್ಜಿಯನ್ನು ಅಲ್ಲಿ ನೀಡಿರುವ ವಿವರಗಳನ್ನು ನೀಡಿ ತುಂಬಿ.

ಉದ್ಯೋಗದಾತರು ಸಹ ಇದೇ ವೆಬ್‌ಸೈಟ್‌ಗೆ ಭೇಟಿ ನೀಡಿ. 2ನೇ ಹಂತದಲ್ಲಿ ರಿಜಿಸ್ಟರ್ ಮೇಲೆ ಕ್ಲಿಕ್‌ ಮಾಡಿ, 3ನೇ ಹಂತದಲ್ಲಿ ಉದ್ಯೋಗಗಳ ಮೇಲೆ ಕ್ಲಿಕ್ ಮಾಡಿ, 4ನೇ ಹಂತದಲ್ಲಿ ಉದ್ಯೋಗದಾತ ನೋಂದಣಿ ಮೇಲೆ ಕ್ಲಿಕ್ ಮಾಡಿ, 5ನೇ ಹಂತದಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಿ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 1800 599 9918 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು.

ಕರ್ನಾಟಕದ ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಈಗಾಗಲೇ ಗ್ಯಾರಂಟಿ ಯೋಜನೆ 'ಯುವನಿಧಿ'ಗೆ ಚಾಲನೆ ನೀಡಿದೆ. ಯೋಜನೆಯಡಿ 2023ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ ಖಾಸಗಿ/ ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದವರು ನೋಂದಣಿ ಮಾಡಿಕೊಳ್ಳಬೇಕು.

ಯೋಜನೆಗೆ ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳಲ್ಲಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುದ್ಯೋಗಿ ಯುವಕ/ ಯುವತಿಯರಿಗೆ ಅನುಕೂಲವಾಗುವಂತೆ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+