ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಬೆಂಗಳೂರು, ಜೂನ್ 01 : ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಇತರೇ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಜೂನ್ 22 ರೊಳಗೆ ಸಲ್ಲಿಸತಕ್ಕದ್ದು.

Stenographers, typist recruitment in Raichur district court

ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 10
ವೇತನ ಶ್ರೇಣಿ: 14550 ರಿಂದ 26700 ರು. (ತಿಂಗಳಿಗೆ) ಹಾಗೂ ಇತರ ಭತ್ಯೆಗಳೊಂದಿಗೆ

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಆಯ್ಕೆ ವಿಧಾನ: ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಮೆರಿಟ್ ಆಧಾರದ ಮೇಲೆ 1:5 ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ವಯೋಮಿತಿ:
22-06-2017 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು, ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ: 35 ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ.

ಬೆರಳಚ್ಚುಗಾರ ಹುದ್ದೆ: 10
ವೇತನ ಶ್ರೇಣಿ: 11600 ರು 21000 ತಿಂಗಳಿಗೆ ಹಾಗೂ ಇತರ ಭತ್ಯೆಗಳೊಂದಿಗೆ.

ಬೆರಳಚ್ಚು ನಕಲುಗಾರರು: ಸಂಖ್ಯೆ: 09
ವೇತನ ಶ್ರೇಣಿ: 11600 ರಿಂದ 21000 ರು. ತಿಂಗಳಿಗೆ.

ವಿದ್ಯಾರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು-584101.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+