ನೈಋತ್ಯ ರೈಲ್ವೆ ನೇಮಕಾತಿ; 147 ಹುದ್ದೆ, ಹುಬ್ಬಳ್ಳಿಯಲ್ಲಿ ಕೆಲಸ
ಹುಬ್ಬಳ್ಳಿ, ಏಪ್ರಿಲ್ 08; ನೈಋತ್ಯ ರೈಲ್ವೆ 147 ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 25 ಕೊನೆಯ ದಿನವಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿ (ಕರ್ನಾಟಕ)ಯಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳಿಗೆ ನೈಋತ್ಯ ರೈಲ್ವೆ ನೇಮಕಾತಿ ನಿಯಮಗಳ ಅನ್ವಯ ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ವೆಬ್ ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಬೋರ್ಡ್‌ನಿಂದ ಪದವಿ ಪಡೆದಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ ವಯೋಮಿತಿ 42 ವರ್ಷಗಳು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್ ಆಗಿ ನೇಮಕಾತಿ ಆದೇಶವನ್ನು ಪರಿಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವಾಗ ಮುಂದಿನ ಸಂವಹನಕ್ಕಾಗಿ ಸರಿಯಾದ ಇ-ಮೇಲ್ ವಿಳಾಸ, ಮೊಬೈಲ್ ಸಂಖ್ಯೆ ನಮೂದಿಸಬೇಕು.
ಅರ್ಜಿಗಳನ್ನು ಸಲ್ಲಿಕೆ ಮಾಡಿದ ನಂತರ ಅಗತ್ಯವಿರುವ ಗುರುತಿನ ಚೀಟಿಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ಸಬ್ ಮಿಟ್ ಬಟನ್ ಒತ್ತಿದ ಬಳಿಕ ರೆಫರೆನ್ಸ್ ನಂಬರ್, ಅಪ್ಲಿಕೇಶನ್ ನಂಬರ್ ಅನ್ನು ಸೇವ್ ಮಾಡಿಟ್ಟುಕೊಳ್ಳಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ rrchubli.in ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಬಹುದಾಗಿದೆ. ನೇಮಕಾತಿ ಬಗೆಗಿನ ಗೊಂದಲ, ಹೆಚ್ಚಿನ ಮಾಹಿತಿಗಾಗಿ [email protected] ವಿಳಾಸಕ್ಕೆ ಇ-ಮೇಲ್ ಮಾಡಿ.
ಉಚಿತ ಕೋರ್ಸ್‌ಗೆ ಅರ್ಜಿ ಆಹ್ವಾನ; ಕೊಪ್ಪಳ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ವಿವಿಧ ಕೌಶಲ್ಯ ಕೋರ್ಸ್‌ಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಯುವ ಜನತೆಗೆ ಕೌಶಲ್ಯ ಅಭಿವೃದ್ಧಿಪಡಿಸಿ ಅವರನ್ನು ಉದ್ಯೋಗವಂತರನ್ನಾಗಿ ಮಾಡುವುದು ಉದ್ದೇಶವಾಗಿದೆ. ಕೊಪ್ಪಳ ನಗರಕ್ಕೆ ಸಮೀಪವಿರುವ ತಾಲ್ಲೂಕಿನ ದದೇಗಲ್ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಹಿಂದುಳಿದ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.
ಎಸ್. ಎಸ್. ಎಲ್. ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಸಿಎನ್‌ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿಎನ್‌ಸಿ ಟರ್ನಿಂಗ್ ಮಷಿನ್ ಆಪರೇಟರ್ ಮತ್ತು ಮಿಲ್ಲಿಂಗ್ ಮಷಿನ್ ಆಪರೇಟರ್ ಕೋರ್ಸ್‌ಗಳು ಮತ್ತು ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಸಿಎನ್‌ಸಿ ಪ್ರೋಗ್ರಾಮಿಂಗ್ & ಅಪರೇಷನ್ ಕೋರ್ಸ್ ಹಾಗೂ ಐಟಿಐ, ಡಿಪ್ಲೋಮಾ, ಬಿಇ ವಿದ್ಯಾಭ್ಯಾಸ ಹೊಂದಿದ ಅಭ್ಯರ್ಥಿಗಳಿಗೆ ಕ್ಯಾಮ್ & ಕ್ಯಾಡ್ ಕೋರ್ಸ್ ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 35 ವರ್ಷಗಳು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರಸ್ತೆ, ದದೇಗಲ್ ಗ್ರಾಮ ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ 9902556110. ಆಸಕ್ತರು ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications