ಸಿಂಡಿಕೇಟ್ ಬ್ಯಾಂಕಿನಲ್ಲಿ ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
Recommended Video

ಬೆಂಗಳೂರು, ಜನವರಿ 02 : ಭಾರತದಾದ್ಯತ ಸಿಂಡಿಕೇಟ್ ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
500 ಪ್ರೊಬೇಷನರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ 17 ಜನವರಿ, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಪ್ರೊಬೇಷನರಿ ಅಧಿಕಾರಿ
ಸ್ಥಳ: ಭಾರತದಾದ್ಯಂತ
ವೇತನ ಶ್ರೇಣಿ: 15000 ರು. ತಿಂಗಳಿಗೆ
ವಿದ್ಯಾರ್ಹತೆ: ಕೇಂಧ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ ಶೇ.60 ಅಂಕಗಳೊಂದಿಗೆ ಉತ್ತೀರ್ಣರಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಇನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳೊಂದಿಗೆ ಡಿಗ್ರಿ ಪಡೆದಿರಬೇಕು.
ವಯೋಮಿತಿ: ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 01.10.2017ಕ್ಕೆ ಅನ್ವಯವಾಗುವಂತೆ 20 ರಿಂದ 28 ವರ್ಷ ವಯೋಮಿತಿಯವರಾಗಿರಬೇಕು.
ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications