ಸಿಂಡಿಕೇಟ್ ಬ್ಯಾಂಕ್ ನೇಮಕಾತಿ : 14 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಮೇ 08 : ಸಿಂಡಿಕೇಟ್ ಬ್ಯಾಂಕ್ 14 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/5/2019 ಕೊನೆಯ ದಿನವಾಗಿದೆ.
ಸಿಂಡಿಕೇಟ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 14 ಹುದ್ದೆಗಳಿದ್ದು, ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್/ ಪಿಜಿ ಡಿಗ್ರಿ/ಬಿಸಿಎ/ಎಂಸಿಎ ಪದವಿ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ : ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಮ್ಯಾನೇಜರ್ ಹುದ್ದೆಗೆ 25 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಆನ್‌ಲೈನ್ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications