Teachers recruitment: 2500 ಪ್ರೌಢ ಶಾಲಾ ಶಿಕ್ಷಕರ ನೇಮಕಕ್ಕೆ ಆದೇಶ
ಬೆಂಗಳೂರು, ಸೆಪ್ಟಂಬರ್ 13: ರಾಜ್ಯ ಸರ್ಕಾರ 2,500 ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ನೇಮಕಕ್ಕೆ ಮುಂದಾಗಿದೆ. ಈ ಮೂಲಕ ಅರ್ಹತೆ ಇದ್ದು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಕಾತುರರಾಗಿದ್ದ ಸಾವಿರಾರು ಮಂದಿಗೆ ಸಿಹಿ ಸುದ್ದಿ ನೀಡಿದೆ.
ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ಇದೆ. ಹೀಗಾಗಿ ಸರ್ಕಾರಿ ಪ್ರೌಢ ಶಾಲಾ ಮಟ್ಟದಲ್ಲಿ ಖಾಲಿ ಇರುವ ಎಲ್ಲ ವಿಧದ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದ್ದನ್ನು ರಾಜ್ಯ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಒಟ್ಟು 2,500 ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಿದ್ದು, ಇದರಲ್ಲಿ 2,200 ಸಹ ಶಿಕ್ಷಕರು, 200ದೈಹಿಕ ಶಿಕ್ಷಕ ಹುದ್ದೆಗಳು ಮತ್ತು 100 ವಿಶೇಷ ಶಿಕ್ಷಕರ ಹುದ್ದೆಗಳಿಗೆ ಆದಷ್ಟು ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಈ ಹಿಂದೆ 2016ರಲ್ಲಿ ಕೊನೆಯದಾಗಿ ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಅದಾದ ಬಳಿಕ ಆರು ವರ್ಷಗಳ ನಂತರ ಪುನಃ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಖಾಲಿ ಶಿಕ್ಷಕ ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಪ್ರೌಢಶಾಲೆಗಳಲ್ಲಿ ತಾಂಡವವಾಡುತ್ತಿರುವ ಅಗತ್ಯ ಶಿಕ್ಷಕರ ಕೊರತೆಯನ್ನು ಸರ್ಕಾರ ನೀಗಿಸಲಿದೆ. ಶಿಕ್ಷಣ ವಲಯದಲ್ಲಿ ಸೇವೆ ಸಲ್ಲಿಲು ಇಚ್ಛಿಸುವ ಅಭ್ಯರ್ಥಿಗಳು ದಾಖಲೆಗಳ ಸಹಿತ ಅರ್ಜಿ ಸಲ್ಲಿಕೆಗೆ ಸಿದ್ಧವಾಗಬೇಕಿದೆ.
ಕೆಲವು ಖಾಸಗಿ ಶಾಲೆಗಳ ಸ್ಥಿತಿ ಅತಂತ್ರ
ಕರ್ನಾಟಕದಲ್ಲಿ ಖಾಸಗಿ ಶಾಲಾ ಕಾಲೇಜುಗಳಿಗೇನು ಬರವಿಲ್ಲ. ಹೀಗಿದ್ದರೂ ರಾಜ್ಯದಲ್ಲಿ ವಾರ್ಷಿಕವಾಗಿ ಖಾಸಗಿವಯವರಿಂದ ನೂರಾರು ಹೊಸ ಶಾಲೆಗಳು, ಕಾಲೇಜುಗಳು ತಲೆ ಎತ್ತುತ್ತಲೇ ಇವೆ. ಈ ನಡುವೆ ಶಿಕ್ಷಣ ಇಲಾಖೆ ಇತ್ತೀಚೆಗೆ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿತ್ತು. ಆಹ್ವಾನದ ಮೇರೆಗೆ ಜುಲೈ 25ರ ವರೆಗೆಗೆ ಹೊಸ ಖಾಸಗಿ ಶಿಕ್ಷಣ ಸಂಸ್ಥೆ ತೆರೆಯುತ್ತಿರುವ 980ಕ್ಕೂ ಅಧಿಕ ಸಂಸ್ಥೆಗಳು ಅನುಮತಿಗಾಗಿ ಅರ್ಜಿ ಸಲ್ಲಿಸಿರುವುದು ಗೊತ್ತಾಗಿದೆ.
ಮುಖ್ಯವಾಗಿ ಈ ಖಾಸಗಿ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರ ಶೈಕ್ಷಣಿಕ ಸಂಸ್ಥೆ ತೆರೆಯಲು ಅನುಮತಿ ನೀಡುವ ಮುನ್ನವೇ ಮಕ್ಕಳನ್ನು ನೇಮಕ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸರ್ಕಾರದ ನಿರ್ಧಾರದಿಂದ ಈಗಾಗಲೇ ಚಾಲ್ತಿಯಲ್ಲಿರುವ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಅತಂತ್ರ ಸ್ಥಿತಿ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.











Click it and Unblock the Notifications