Teacher Recruitment: ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ
ಶಿವಮೊಗ್ಗ, ಜೂನ್ 12; ಶಿವಮೊಗ್ಗದಲ್ಲಿ ನೇರಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ಜೂ.19 ರಂದು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
2023-24ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿ ಪ್ರಾಥಮಿಕ ಹಂತದಲ್ಲಿ 2 ರಿಂದ 5 ನೇ ತರಗತಿ ಹಾಗೂ ಪ್ರೌಢಶಾಲಾ ಹಂತದಲ್ಲಿ 7 ರಿಂದ 12 ನೇ ತರಗತಿಗಳಿಗೆ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್19ರಂದು ಸಲ್ಲಿಕೆ ಮಾಡಬೇಕು. ಅರ್ಜಿಯಲ್ಲಿ ಕಡ್ಡಾಯವಾಗಿ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿಗಳನ್ನು ಉಪ ನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು.

ಕಾನೂನು ಪದವೀಧರರಿಗೆ ತರಬೇತಿ ; ಸಮಾಜ ಕಲ್ಯಾಣ ಇಲಾಖೆಯು 2023ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕಾನೂನು ಪದವಿ ಪಡೆದು 2ವರ್ಷ ಮೀರಿರಬಾರದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10,000 ರೂ. ಗಳ ಶಿಷ್ಯವೇತನ ನೀಡಲಾಗುವುದು.
ಆಸಕ್ತರು ತಮ್ಮ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ www.sw.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಶನ್, ನೂರಡಿ ರಸ್ತೆ, ವಿನೋಬನಗರ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-249241.











Click it and Unblock the Notifications