ಧಾರವಾಡ; ನರ್ಸರಿ ಸ್ಕೂಲ್ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡದಲ್ಲಿ ನರ್ಸರಿ ಸ್ಕೂಲ್ ಟೀಚರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಮಾರ್ಚ್ 30ರಂದು ನಡೆಯವು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಧಾರವಾಡ, ಮಾರ್ಚ್ 21; ಧಾರವಾಡದಲ್ಲಿ ನರ್ಸರಿ ಸ್ಕೂಲ್ ಟೀಚರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 179 ದಿನಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಮಾರ್ಚ್ 30ರಂದು ಬೆಳಗ್ಗೆ 10.30ಗಂಟೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ.
ಕೃಷಿ ವಿಶ್ವವಿದ್ಯಾಲಯದ ಮಾನವ ವಿಕಾಸ ಮತ್ತು ಕುಟುಂಬ ಅಧ್ಯಯನ ವಿಭಾಗದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ (ಬಿ. ಎಚ್. ಎಸ್. ಸಿ ಅಥವಾ ಬಿಎಸ್‍ಸಿ) ಸಮುದಾಯ ವಿಜ್ಞಾನ ಅಥವಾ (ಎಂಎಚ್‍ಎಸ್‍ಸಿ) ಮಾನವ ಅಭಿವೃದ್ಧಿ ಮತ್ತು ಕುಟುಂಬ ಅಧ್ಯಯನದ ವಿದ್ಯಾರ್ಹತೆ ಹೊಂದಿದ ನರ್ಸರಿ ಸ್ಕೂಲ್ ಟೀಚರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 0836-22443714 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಅಥವ ವೆಬ್‌ಸೈಟ್ http://www.uasd.idu ಭೇಟಿ ನೀಡಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಮಾರ್ಚ್ 28ರಂದು ಸಂದರ್ಶನ; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಸಂಯೋಜಕರ 1 ಹುದ್ದೆಯನ್ನು ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಎಮ್. ಎಸ್. ಕೃಷಿ (ಅಗ್ರಿ), ಬಿ. ಎಸ್ಸಿ, ಎಮ್ ಎಸ್ಸಿ, ಎಮ್ ಬಿ ಎ, ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ www.uasd.edu ವೆಬ್‌ಸೈಟ್ ನೋಡಬಹುದು ಅಥವ ಮೊಬೈಲ್ ಸಂಖ್ಯೆ 9449809436 ಸಂಪರ್ಕಿಸಬಹುದು.
ಹೆಚ್‍ಇಓ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ; ಜಿಲ್ಲಾ ತರಬೇತಿ ಕೇಂದ್ರ (ಆರೋಗ್ಯ) ಶಿವಮೊಗ್ಗ ಇಲ್ಲಿಗೆ ಆರೋಗ್ಯ ಶಿಕ್ಷಣಾಧಿಕಾರಿ (ಹೆಚ್‍ಇಓ) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯ ವಯಸ್ಸು 60 ರಿಂದ 65 ವರ್ಷಗಳ ಒಳಗಿರಬೇಕು. ಅಭ್ಯರ್ಥಿ ಹಿರಿಯ ಆರೋಗ್ಯ ಸಹಾಯಕರು ಅಥವಾ ಇನ್ನೂ ಹೆಚ್ಚಿನ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿರಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸಿದ ಹಾಗೂ ತರಬೇತಿ ನೀಡಿದ ಅನುಭವ ಇರಬೇಕು. ಆಸಕ್ತರು ಅರ್ಜಿಯನ್ನು ಜಿಲ್ಲಾ ತರಬೇತಿ ಕೇಂದ್ರ (ಆರೋಗ್ಯ), ಶಿವಮೊಗ್ಗ ಇಲ್ಲಿಗೆ 3/4/2023ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.












Click it and Unblock the Notifications