ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; ಮೇ 15ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಏಪ್ರಿಲ್ 20 : ನರೇಗಾ ಯೋಜನೆಯಡಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಲು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 15/5/2020 ಕೊನೆಯ ದಿನವಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನರೇಗಾ ಯೋಜನೆಯಡಿ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹೊರಗುತ್ತಿಗೆ ಆಧಾರದ ಮೇಲೆ 30 ಜಿಲ್ಲೆಗಳಲ್ಲಿಯೂ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ತಾಂತ್ರಿಕ ಸಹಾಯಕ ಹುದ್ದೆಗಳನ್ನು ಅರಣ್ಯೀಕರಣ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳಡಿ ನೇಮಕ ಮಾಡಲಾಗುತ್ತದೆ. ಅರಣ್ಯೀಕರಣ ತಾಂತ್ರಿಕ ಸಹಾಯಕರು 125, ಕೃಷಿ/ತೋಟಗಾರಿಕೆ ಮತ್ತು ರೇಷ್ಮೆ ತಾಂತ್ರಿಕ ಸಹಾಯಕರು 282 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರಣ್ಯೀಕರಣ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಕನಿಷ್ಠ ಬಿಎಸ್‌ಸಿ ಅಥವ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರಬೇಕು. ಎಂಎಸ್ಸಿ/ಸಂಬಂಧಿಸಿದ ಕಾರ್ಯಕ್ಷೇತ್ರ ಅನುಭವ ಇರುವವರಿಗೆ ಮೊದಲ ಆದ್ಯತೆ. 21 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದ್ದು, 22 ಸಾವಿರ ವೇತನ ಜೊತೆಗೆ ಪ್ರಯಾಣ ಭತ್ಯೆ ನೀಡಲಾಗುತ್ತದೆ.
ಕೃಷಿ/ತೋಟಗಾರಿಕೆ ಮತ್ತು ರೇಷ್ಮೆ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಬಿಎಸ್‌ಸಿ ಕೃಷಿ, ಎಂಸ್ಸಿ ಹಾರ್ಟಿಕಲ್ಚರ್/ಸಿರಿಕಲ್ಚರ್ ಅಥವ ಸಮಾನಾಂತರ ಸಂಬಂಧಿಸಿದ ವಿದ್ಯಾರ್ಹತೆ ಪಾಸು ಮಾಡಿರಬೇಕು. 21 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 22 ಸಾವಿರ ವೇತನದ ಜೊತೆ ಪ್ರಯಾಣ ಭತ್ಯೆ ನೀಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆ ವೆಬ್ ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಮೂರು ಜಿಲ್ಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ತಿಳಿದಿರಬೇಕು. ಕನ್ನಡ ಮತ್ತು ಇಂಗ್ಲಿಶ್ ಭಾಷೆ ಚೆನ್ನಾಗಿ ತಿಳಿದಿರಬೇಕು.
ಆಸಕ್ತರು 20/4/2020 ರಿಂದ 15/5/2020ರ ತನಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications