Gram Panchayat; ಡಾಟಾ ಎಂಟ್ರಿ ಆಪರೇಟರ್ ನೇಮಕಕ್ಕೆ ತಾತ್ಕಾಲಿಕ ತಡೆ
ಬೆಂಗಳೂರು, ಜನವರಿ 01: ಕರ್ನಾಟಕ ಸರ್ಕಾರ ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಹೊಸದಾಗಿ ಒಬ್ಬರು ಡಾಟಾ ಎಂಟ್ರಿ ಆಪರೇಟರ್ ನೇಮಕ ಮಾಡಲು ಆದೇಶ ಹೊರಡಿಸಿತ್ತು. ಆದರೆ ಈಗ ನೇರ ನೇಮಕಾತಿಗೆ ತಾತ್ಕಾಲಿಕ ತಡೆ ನೀಡಲಾಗಿದೆ.
ನಿರ್ದೇಶಕರು (ಆ-1) ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಯಲಯ ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಸರ್ಕಾರದ ಆದೇಶ 29/9/2020 ಮತ್ತು 21/10/2023ರ ಆದೇಶವನ್ನು ಉಲ್ಲೇಖ ಮಾಡಿದ್ದಾರೆ.

ತಾತ್ಕಾಲಿಕ ತಡೆ ಏಕೆ?; ಜನವರಿ 1, 2024ರಂದು ಬರೆದಿರುವ ಪತ್ರದಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗಳಿಗೂ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಅನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವ ಸೂಚನೆಯನ್ನು ಮುಂದಿನ ನಿರ್ದೇಶನ ನೀಡುವವರೆಗೂ ತಾತ್ಕಾಲಿಕವಾಗಿ ವಿಲೇ ಇಡುವ ಕುರಿತು ಎಂದು ವಿಷಯ ಪ್ರಸ್ತಾಪಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರೆ ಸೇವಾ ಷರತ್ತುಗಳು, ನಿಯಮಗಳು) 2020ರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ವಿಧಾನ, ವಿದ್ಯಾರ್ಹತೆ, ಆಯ್ಕೆ ಸಮಿತಿ ನಿಗದಿಪಡಿಸಿ ಆದೇಶಿಸಲಾಗಿರುತ್ತದೆ ಎಂದು ಹೇಳಿದೆ.
ಡಾಟಾ ಎಂಟ್ರಿ ಆಪರೇಟರ್‌ಗಳ ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ನಿರ್ದೇಶಿಸಿರುವಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನವನ್ನು ಪಾವತಿಸಲು ಆದೇಶ ಹೊರಡಿಸಲಾಗಿರುತ್ತದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳು-2020 ರಲ್ಲಿ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ತರಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದರಿಂದ ಮುಂದಿನ ನಿರ್ದೇಶನ ನೀಡುವವರೆಗೂ ತಾತ್ಕಾಲಿಕವಾಗಿ ವಿಲೇ ಇಡಲು ಈ ಮೂಲಕ ತಿಳಿಸಲಾಗಿದೆ ಎಂದು ತಿಳಿಸಿದೆ.
ಅಕ್ಟೋಬರ್‌ನಲ್ಲಿ ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗಳಿಗೂ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಅನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವ ಕುರಿತು ಆದೇಶ ಹೊರಡಿಸಿದ್ದರು. ಈ ಆದೇಶದ ಅನ್ವಯ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಡಾಟಾ ಎಂಟ್ರಿ ಆಪರೇಟರ್ ನೇಮಕವಾಗಬೇಕಿತ್ತು. ಒಟ್ಟಾರೆಯಾಗಿ 5980 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ಅಂದಾಜಿಸಲಾಗಿತ್ತು.
ಪಂಚಾಯಿತಿಯ ಈ ನೇಮಕಾತಿ ಸಂದರ್ಭದಲ್ಲಿ ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೇ ಈ ನೇಮಕಾತಿಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾಗಿರುವ ಕೆಲಸದ ಒತ್ತಡ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.
ಸರ್ಕಾರದ ಮೂಲಗಳ ಮಾಹಿತಿ ಪ್ರಕಾರ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಗೊಂಡವರಿಗೆ ಕನಿಷ್ಠ 16,738 ರೂ. ವೇತನ ನಿಗದಿಪಡಿಸಲಾಗಿತ್ತು. ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ಈ ವೇತನ ಪಾವತಿಸಬೇಕು ಸೂಚನೆ ಕೊಡಲಾಗಿತ್ತು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications