ತುಮಕೂರು; ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ತುಮಕೂರು, ಮೇ 29; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ತುಮಕೂರು 'ಸೇವಕ ಹುದ್ದೆಗಳ' ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 15/6/2022 ಕೊನೆಯ ದಿನವಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ತುಮಕೂರು ಘಟಕದಲ್ಲಿ ಖಾಲಿ ಇರುವ ಸೇವಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 51 ಹುದ್ದೆಗಳಿದ್ದು (ಬ್ಯಾಕ್‌ಲಾಗ್ 4 ಹಾಗೂ ಹೊಸದಾಗಿ 47 ಹುದ್ದೆಗಳು).

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ದಿಂದ 28,950 ರೂ. ತನಕ ವೇತನ ನಿಗದಿ ಮಾಡಲಾಗಿದೆ.

Tumakuru District Court Recruitment Apply For Peon Posts

ಹೊಸ ಹುದ್ದೆಗಳ ವಿವರ; ಇತರೆ 12, ಮಹಿಳೆ 13, ಗ್ರಾಮೀಣ 12, ಕನ್ನಡ ಮಾಧ್ಯಮ 1, ಮಾಜಿ ಸೈನಿಕ 4, ಯೋಜನಾ ನಿರಾಶ್ರಿತ 1, ಅಂಗವಿಕಲ 4, ಒಟ್ಟು 47. ಹುದ್ದೆಗಳ ಸಂಖ್ಯೆ ಮತ್ತು ವರ್ಗೀಕರಣವು ಯಾವುದೇ ಮುನ್ಸೂಚನೆಯಿಲ್ಲದ ಬದಲಾವಣೆಗೆ ಒಳಪಡಬಹುದು.

ವಿದ್ಯಾರ್ಹತೆ ವಿವರಗಳು; ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

10ನೇ ತರಗತಿಯ ಅಂಕಗಳು ಶ್ರೇಣಿ ಇತ್ಯಾದಿಗಳಲ್ಲಿದ್ದರೆ ಅದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಂಕಪಟ್ಟಿಯಲ್ಲಿರುವಂತೆ ಶೇಕಡಾವಾರು ಅಂಕಗಳಾಗಿ ಪರಿವರ್ತಿಸಿ, ಗರಿಷ್ಠ ಅಂಕಗಳು ಮತ್ತು ಪಡೆದ ಅಂಕಗಳ ಒಟ್ಟು ಶೇಕಡಾವಾರಿನ ನಮೂದು ಇರಬೇಕು. ತಪ್ಪಿದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ವಯೋಮಿತಿ; ಅರ್ಜಿಗಳನ್ನು ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ). ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ವರ್ಷಗಳು, ಪ್ರವರ್ಗ 2ಎ/2ಬಿ/3ಎ/3ಬಿ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 40 ವರ್ಷಗಳು.

ಸರ್ಕಾರಿ ಸೇವೆಯಲ್ಲಿ ಇರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ. ಜಾ, ಪ. ಪಂ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+