ತುಮಕೂರು ಕೋರ್ಟ್‌ನಲ್ಲಿ 21 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್ 16 : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 18/4/2020 ಕೊನೆಯ ದಿನವಾಗಿದೆ.
ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತೆ 21 ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಆಯ್ಕೆಯಾದವರು ತುಮಕೂರಿನಲ್ಲಿ ಕೆಲಸ ಮಾಡಬೇಕಿದೆ.
ಬೆರಳಚ್ಚುಗಾರ ಹುದ್ದೆ (7) ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆ (3) ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶ ಜಾರಿಕಾರರ (11) ಹುದ್ದೆಗೆ ಅರ್ಜಿ ಹಾಕುವವರು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಎಲ್ಲಾ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷ. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ & ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಸರ್ಕಾರಿ ಸೇವೆಯಲ್ಲಿ ಇರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.
ಅರ್ಜಿಗಳನ್ನು ಸಲ್ಲಿಸುವ 2ಎ/2ಬಿ/3ಎ/3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳು 200 ರೂ., ಪ.ಜಾ/ಪ.ಪಂ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.












Click it and Unblock the Notifications