ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ಜಿಲ್ಲೆಯಲ್ಲಿ ಎರಡು ಮಿನಿ ಉದ್ಯೋಗ ಮೇಳ

|
Google Oneindia Kannada News

ಮಂಡ್ಯ, ಆಗಸ್ಟ್ 03; ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಆಗಸ್ಟ್ 14ರ ಒಳಗಾಗಿ ಎರಡು ಮಿನಿ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆವತಿಯಿಂದ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆ ನಡೆಯಿತು.

"ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆಯಡಿ ಯುವಕ-ಯುವತಿಯರನ್ನು ಹೆಚ್ಚು ನೋಂದಣಿ ಮಾಡಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವತಿ ಹೇಳಿದರು.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ನೇಮಕಾತಿ; 250 ಹುದ್ದೆಗಳು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ನೇಮಕಾತಿ; 250 ಹುದ್ದೆಗಳು

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಜುಲೈ 21, 2021 ರಿಂದ ಆಗಸ್ಟ್ 21, 2021 ರವರೆಗೆ ಕೌಶಲ್ಯ ಮಾಸವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಆಗಸ್ಟ್ 14ರ ಒಳಗಾಗಿ 2 ಮಿನಿ ಉದ್ಯೋಗ ಮೇಳಗಳನ್ನು ಆಯೋಜಿಸುವಂತೆ ಸೂಚನೆ ನೀಡಿದರು.

ಹಾವೇರಿ ಜಿಲ್ಲಾ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗೆ ಅರ್ಜಿ ಹಾಕಿ ಹಾವೇರಿ ಜಿಲ್ಲಾ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗೆ ಅರ್ಜಿ ಹಾಕಿ

Two Job Fair In Mandya Before August 14

ಎಲ್ಲಿ ನಡೆಯಲಿದೆ ಮೇಳ; ಉದ್ಯೋಗ ಮೇಳವನ್ನು ಸರ್ಕಾರಿ ಮಹಿಳಾ ಕಾಲೇಜು, ಮಂಡ್ಯ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಅಥವಾ ಸರ್ಕಾರಿ ತಾಂತ್ರಿಕ ವಿದ್ಯಾಲಯ, ಕೆ. ಆರ್. ಪೇಟೆಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲು ನಿರ್ದೇಶನ ನೀಡಿದರು.

Nainital ಬ್ಯಾಂಕ್ ನೇಮಕಾತಿ; 150 ಹುದ್ದೆಗೆ ಅರ್ಜಿ ಹಾಕಿ Nainital ಬ್ಯಾಂಕ್ ನೇಮಕಾತಿ; 150 ಹುದ್ದೆಗೆ ಅರ್ಜಿ ಹಾಕಿ

ಉದ್ಯೋಗ ವಿನಿಮಯ ಅಧಿಕಾರಿಗಳು ಫಲಾನುಭವಿಗಳು ಉದ್ಯೋಗದಾತರ ಮಾಹಿತಿಯನ್ನು ನೀಡಲು ತಿಳಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರನ್ನು ಮಂಡ್ಯ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಕುರಿತು ಮಾಹಿತಿ ನೀಡಲು ಸೂಚಿಸಿದರು.

ಉದ್ಯೋಗ ಮೇಳದ ಬಗ್ಗೆ ಮಾಹಿತಿಯನ್ನು ನೀಡಲು ಭಿತ್ತಿ ಚಿತ್ರಗಳು, ಪೋಸ್ಟರ್‌ಗಳ ಮೂಲಕ ಜನರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಮುಖ್ಯಮಂತ್ರಿ ಗಳ ಕೌಶಲ್ಯ ಕರ್ನಾಟಕ ಯೋಜನೆ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ್ ಯೋಜನೆಯನ್ನು ಅಭಿವೃದ್ಧಿಪಡಿಸಿ ಎಂದು ನಿರ್ದೇಶನ ನೀಡಿದರು.

ಆರೋಗ್ಯ ಕ್ಷೇತ್ರದ ತರಬೇತಿಗೆ ಸಂಬಂಧಿಸಿದಂತೆ ಉತ್ತಮ ತರಬೇತಿ ನೀಡಿ. ಉದ್ಯೋಗ ಮೇಳದ ಮೂಲಕ ಜನರಿಗೆ ಉದ್ಯೋಗ ನೀಡಿ ಎಂದರು. ತರಬೇತಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ತರಬೇತಿ ನೀಡಲು ತರಬೇತಿ ಕೇಂದ್ರದವರು ಕ್ರಮ ಕೈಗೊಳ್ಳಬೇಕು. ನಿರ್ಮಿತಿ ಕೇಂದ್ರದಿಂದ ತರಬೇತಿ ಕೇಂದ್ರ, ಐಟಿಐ ಕಾಲೇಜುಗಳನ್ನು ಗುಣಮಟ್ಟದಲ್ಲಿ ನಿರ್ಮಾಣ ಮಾಡಲು ಸೂಚನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ನಾಗಾನಂದ, ಜಿಲ್ಲಾ ಕೌಶಲ್ಯಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಕುಮಾರ್ ಡಿ. ಎಚ್., ಆರೋಗ್ಯಾಧಿಕಾರಿ ಡಾ. ಧನಂಜಯ, ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ ಮುಂತಾದವರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಹುದ್ದೆ; ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಅಂಗನವಾಡಿ ಕಾರ್ಯಕರ್ತೆ; ದುಂಡಳ್ಳಿ ಪಂಚಾಯಿತಿಯ ಹೆಮ್ಮಾನೆ(ಇತರೆ), ವಾಲ್ನೂರು ತ್ಯಾಗತ್ತೂರು ಪಂಚಾಯಿತಿಯ ಬಾಳೆಗುಮಡಿ(ಪ.ಪಂ.) ಗುಡ್ಡೆಹೊಸೂರಿನ ದೊಡ್ಡಬೆಟ್ಟಗೇರಿ(ಪ.ಪಂ.), ಗಣಗೂರು ಪಂಚಾಯಿತಿಯ ಗೋಣಿಮಾರೂರು(ಇತರೆ), ಚೌಡ್ಲು ಪಂಚಾಯಿತಿಯ ಕಿಬ್ಬೆಟ್ಟ ಮಿನಿ(ಇತರೆ), ಬೇಳೂರು ಪಂಚಾಯಿತಿಯ ಕುಸುಬೂರು ಮಿನಿ(ಪ.ಜಾ), ನೇರುಗಳಲೆ ಪಂಚಾಯಿತಿಯ ಅರೆಯೂರು(ಇತರೆ)

ಅಂಗನವಾಡಿ ಸಹಾಯಕಿ; ದುಂಡಳ್ಳಿ ಪಂಚಾಯಿತಿಯ ಹೆಮ್ಮಾನೆ(ಇತರೆ), ನೇರುಗಳಲೆಯ ಅಬ್ಬೂರುಕಟ್ಟೆ(ಇತರೆ), ಕೂಡುಮಂಗಳೂರು ಪಂಚಾಯಿತಿಯ ವಿಜಯನಗರ(ಇತರೆ), ಕೊಡ್ಲಿಪೇಟೆಯ ಕಿರಿಕೊಡ್ಲಿ(ಇತರೆ), ಹಂಪಾಪುರ(ಇತರೆ), ಬ್ಯಾಡಗೊಟ್ಟದ ಶಿವರಳ್ಳಿ(ಇತರೆ), ನಿಡ್ತ ಪಂಚಾಯಿತಿಯ ನಿಡ್ತಕೊಪ್ಪಲು(ಇತರೆ), ಹರದೂರಿನ ಹೊಸತೋಟ(ಇತರೆ), ಮಾದಾಪುರದ ಮೂವತ್ತೊಕ್ಲು(ಇತರೆ), ಬೆಟ್ಟದಳ್ಳಿಯ ನಗರಳ್ಳಿ(ಇತರೆ)

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು.

18 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ವಿಕಲಚೇತನ ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಅರ್ಜಿಗಳನ್ನು ಸಲ್ಲಿಸಲು ವೆಬ್‍ಸೈಟ್ www.anganwadirecruit.kar.nic.in

English summary
Mandya district administration will organized Two job fair before August 14, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X