UAS Dharwad Jobs 2023: ಡಿ.18ಕ್ಕೆ ಸಹಾಯಕ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ
ಬೆಂಗಳೂರು ಡಿಸೆಂಬರ್ 08: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS Dharwad) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 18 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಒಂದು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದೆ. ಕರ್ನಾಟಕ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಈ ಕೂಡಲೇ ಸಂದರ್ಶನಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅರ್ಜಿ ಸಲ್ಲಿಕೆ, ಸಿದ್ಧತೆಗು ಮೊದಲು ಇಲ್ಲಿ ನೀಡಲಾದ ನೇಮಕಾತಿ ಪೂರ್ಣ ಮಾಹಿತಿ ತಿಳಿಯಿರಿ.

ನೇಮಕಾತಿ ಮಾಹಿತಿ
ಸಂಸ್ಥೆ ಹೆಸರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಹುದ್ದೆ ಹೆಸರು: ಅಸಿಸ್ಟೆಂಟ್ ಪ್ರೊಫೇಸರ್
ಖಾಲಿ ಹುದ್ದೆ ಸಂಖ್ಯೆ: ಒಂದು
ವಿದ್ಯಾರ್ಹತೆ: ಎಂ.ಎಸ್ಸಿ, ಬಯೋಕೆಮಿಸ್ಟ್ರಿಯಲ್ಲಿ ಡಾಕ್ಟರಲ್ ಡಿಗ್ರಿ
ಸಂದರ್ಶನ: ಡಿಸೆಂಬರ್ 18
ಮಾಸಿಕ ವೇತನ: 40,000 ರಿಂದ 45,000 ರೂಪಾಯಿ
ವಿದ್ಯಾರ್ಹತೆ
ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಮಂಡಳಿ ಇಲ್ಲವೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ, ಬಯೋಕೆಮಿಸ್ಟ್ರಿಯಲ್ಲಿ ಡಾಕ್ಟರಲ್ ಡಿಗ್ರಿಯನ್ನು ಪಡೆದಿರುವುದು ಕಡ್ಡಾಯ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯೋಮಿತಿ ವಿವರ
ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳ ವಯಸ್ಸು ನೇಮಕಾತಿಯ ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಗಲಿದೆ. ಸಂದರ್ಶನದಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 40,000 ರಿಂದ 45,000 ರೂ.ವೇತನ ನೀಡಲಾಗುವುದು ಎಂದು ವಿಶ್ವವಿದ್ಯಾಲಯ ಹೇಳಿದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಇಡಲಾಗುತ್ತದೆ. ಅಲ್ಲಿ ಪಾಸಾಗುವ ಅಭ್ಯರ್ಥಿಗಳಿಗೆ ನಂತರ
ಸಂದರ್ಶನ ನಡೆಸಲಾಗುವುದು. ಅಲ್ಲಿ ಆಯ್ಕೆ ಆಗುವವರಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಇನ್ನೂ ಸಂದರ್ಶನ ನಡೆಯುವ ಸ್ಥಳದ ಮಾಹಿತಿ ನೋಡುವುದಾದರೆ, ಡೀನ್ ಕಛೇರಿ (ಕೃಷಿ), ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ ಇಲ್ಲಿ ಡಿಸೆಂಬರ್ 18ರಂದು ಸಂದರ್ಶನ ನಡೆಯಲಿದೆ.












Click it and Unblock the Notifications