ಧಾರವಾಡ ಕೃಷಿ ವಿವಿಯಲ್ಲಿ ಸರ್ಕಾರಿ ಉದ್ಯೋಗಗಳು ಖಾಲಿ ಇವೆ, ವೇತನ ವಿವರ
ಧಾರವಾಡ, ಆಗಸ್ಟ್ 05: ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UASD) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಲುವಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಸರ್ಕಾರಿ ಉದ್ಯೋಗವಕಾಶಕ್ಕಾಗಿ ಕಾಯುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ ಎಂದು ವಿವಿ ತಿಳಿಸಿದೆ.
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (UASD) ಒಟ್ಟು ಎರಡು ತಾಂತ್ರಿಕ ಸಹಾಯಕ, ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳು ಖಾಲಿ ಇವೆ. ಆದ್ದರಿಂದ ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ನಿಗದಿತ ದಿನಾಂಕ, ಸಮಯದೊಳಗೆ ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ವಿಶ್ವವಿದ್ಯಾಲಯವು ಆಗಸ್ಟ್ 9 ರಂದು ಸಂದರ್ಶನ ನಡೆಸುವ ಮೂಲಕ ನೇರವಾಗಿ ಆಯ್ಕೆ ಮಾಡಲಿದೆ. ಆದ್ದರಿಂದ ಕೂಡಲೇ ಅರ್ಜಿ ಸಲ್ಲಿಸಬೇಕು. ಇದಕ್ಕೆ ಮೊದಲು ಹುದ್ದೆಗೆ ಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ, ಪೋಸಿಂಗ್ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ.
ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ
ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ.
ಹುದ್ದೆ ಹೆಸರು: ತಾಂತ್ರಿಕ ಸಹಾಯಕ, ಸೀನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆ: ಎರಡು
ಮಾಸಿಕ ವೇತನ: ನಿಯಮಾನುಸಾರ ವೇತನ
ಪೋಸ್ಟಿಂಗ್ ಸ್ಥಳ: ಧಾರವಾಡ
ಸಂದರ್ಶನ ದಿನ: ಆಗಸ್ಟ್ 09
ಮಾಸಿಕ ವೇತನ: ರೂ. 35,000

ಶೈಕ್ಷಣಿಕ ವಿದ್ಯಾರ್ಹತೆ
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (ಅಗ್ರಿ) ಪದವಿ ಪಡೆದಿರಬೇಕು. ಇನ್ನೂ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜೆನೆಟಿಕ್ಸ್ ಹಾಗೂ ಪ್ಲಾಂಟ್ ಬ್ರೀಡಿಂಗ್ನಲ್ಲಿ ಎಂ.ಎಸ್ಸಿ (ಅಗ್ರಿ) ಮಾಡಿರಬೇಕು ಎಂದು ತಿಳಿಸಲಾಗಿದೆ.
ವಯಸ್ಸಿನ ಮಿತಿ
ಅಭ್ಯರ್ಥಿಗಳ ಕನಿಷ್ಠ ಮತ್ತು ಗರಿಷ್ಠ ವಯಸ್ಸು ನಿಯಮಾನುಸಾರ ಇರಬೇಕಿದ್ದು, ಜಾತಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸಿನಲ್ಲಿ ಸಡಿಲಿಕೆ ನೀಡಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಸಂದರ್ಶನದ ಯಾವಾಗ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಧಾರವಾಡ ವಿಶ್ವವಿದ್ಯಾಲಯದಲ್ಲಿ ಆಗಸ್ಟ್ 09ರಂದು ಬೆಳಗ್ಗೆ 10.30 ಮತ್ತು 11 ಗಂಟೆಗೆ ಸಂದರ್ಶನ ನಡೆಯಲಿದೆ. ಈ ವೇಳೆ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ, ಅನುಭವ ಪರಿಗಣನೆಗೆ ತೆಗೆದುಕೊಳ್ಳಲಿದೆ.












Click it and Unblock the Notifications