ಉಡುಪಿ ಜಿಲ್ಲಾ ಕೋರ್ಟಿನಲ್ಲಿ ವಿವಿಧ ಹುದ್ದೆಗಳಿವೆ, ಅರ್ಜಿಹಾಕಿ

ಉಡುಪಿ, ಜುಲೈ 28 : ಉಡುಪಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ಕೋರ್ಟ್ ವೆಬ್ ಸೈಟ್ ನಲ್ಲಿ ಪಡೆದುಕೊಂಡು ನಿಗದಿತ ದಿನಾಂಕ 21 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Udupi district court recruitment 2017 Apply stenographer, typist post

ಹುದ್ದೆಗಳು: 23
1. Stenographer: 04 posts
2. Typist: 12 posts
3. Typist-Copyist: 07 posts

ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35, 2A, 2B, 3A, 3B ಅಭ್ಯರ್ಥಿಗಳಿಗೆ 18 ರಿಂದ 38, ಹಾಗೂ ಎಸ್ಸಿ ಮತ್ತು ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಆಯ್ಕೆ ವಿಧಾನ: ಕಂಪ್ಯೂಟರ್ ಕೌಶಲ್ಯ ಪರೀಕ್ಷೆ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಜಿಲ್ಲೆ, ಉಡುಪಿ.

ಇನ್ನು ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+