ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಐಡಿಎಐ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

|
Google Oneindia Kannada News

ಬೆಂಗಳೂರು, ಫೆಬ್ರವರಿ 15; ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು (ಯುಐಡಿಎಐ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 24ರ ತನಕ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಸೇರಿದಂತೆ ಒಟ್ಟು 11 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರದಲ್ಲಿ ಕೆಲಸ ಮಾಡಬೇಕಿದೆ.

ಬಿಡಿಎ ನೇಮಕಾತಿ; ಫೆಬ್ರವರಿ 25ರೊಳಗೆ ಅರ್ಜಿ ಹಾಕಿಬಿಡಿಎ ನೇಮಕಾತಿ; ಫೆಬ್ರವರಿ 25ರೊಳಗೆ ಅರ್ಜಿ ಹಾಕಿ

ಡೆಪ್ಯೂಟಿ ಡೈರೆಕ್ಟರ್ 5, ಅಸಿಸ್ಟೆಂಟ್ ಡೈರೆಕ್ಟರ್ 2, ಟೆಕ್ನಿಕಲ್ ಆಫೀಸರ್ 3, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ 1 ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ ನೇಮಕಾತಿ ನಿಯಮಗಳ ಅನ್ವಯ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ದಾವಣಗೆರೆ; ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ ದಾವಣಗೆರೆ; ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

UIDAI Recruitment Apply For 11 Post At Bengaluru

ಡೆಪ್ಯೂಟಿ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಾಫ್ಟ್‌ವೇರ್‌ ಅಭಿವೃದ್ಧಿ, ಡೇಟಾಬೇಸ್ ಅಡ್ಮಿಸ್ಟ್ರೇಷನ್, ನೆಟ್‌ವರ್ಕ್, ನೆಟ್‌ವರ್ಕ್ ಸೆಕ್ಯೂರಿಟಿ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 500 ಹುದ್ದೆಗಳು ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 500 ಹುದ್ದೆಗಳು

ಅಸಿಸ್ಟೆಂಟ್ ಡೈರೆಕ್ಟರ್/ ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಐಸಿಟಿ ಪ್ರಾಜೆಕ್ಟ್/ ಇ-ಆಡಳಿತ/ ಟೆಲಿಕಾಂ/ ಡೇಟಾ ಸೆಂಟರ್ ಆಪರೇಷನ್/ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಣೆ ಮಾಡಿರಬೇಕು.

ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗೆ ಆಡಳಿತ/ ಕಾನೂನು/ ಮಾನವ ಸಂಪನ್ಮೂಲ/ ಫೈನಾನ್ಸ್/ ಅಕೌಂಟ್ಸ್/ ಬಜೆಟ್/ ಯೋಜನಾ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 56 ವರ್ಷಗಳು. 24 ಜನವರಿ 2022ಕ್ಕೆ ಅನ್ವಯವಾಗುವಂತೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸ್ವಯಂ ದೃಢೀಕೃತ ದಾಖಲಾತಿಗಳ ಜೊತೆಗೆ ಸ್ಪೀಡ್ ಅಥವ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ; Unique Identification Authority of India (UIDAI), Aadhaar Complex, NTI Layout, Tata Nagar, Kodigehalli, Technology Centre, Bengaluru - 560092.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ uidai.gov.in

ನೇರ ಸಂದರ್ಶನ; ಬಳ್ಳಾರಿ ಜಿಲ್ಲೆಯ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಅರ್ಹ ಪ್ರತಿನಿಧಿಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಫೆಬ್ರವರಿ 21 ರಂದು ಬೆಳಗ್ಗೆ 11ಕ್ಕೆ ಬಳ್ಳಾರಿಯ ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ನೇರ ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ. ವಯೋಮಿತಿ 18 ರಿಂದ 50 ವರ್ಷ ನಿಗದಿ ಮಾಡಲಾಗಿದೆ. ನುರಿತ ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಂಜಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಮರಿಗೆ ಸಮಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು 5ಸಾವಿರ ರೂ.ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ನೀಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಸಂಪರ್ಕಿಸಬಹುದು ಅಥವ 08392-266037/266768 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Recommended Video

Virat ಫಾರ್ಮ್ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿ Rohit ಕೊಟ್ಟ ಉತ್ತರ ಸಖತ್!! | Oneindia Kannada

English summary
The Unique Identification Authority of India (UIDAI) invited applications for 11 post at Bengaluru. Candidates can apply offline till February 24th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X