ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಐಡಿಎಐ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16; ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 24 ಜನವರಿ ಕೊನೆಯ ದಿನವಾಗಿದೆ.

ಡೆಪ್ಯೂಟಿ ಡೈರೆಕ್ಟರ್ 5, ಅಸಿಸ್ಟೆಂಟ್ ಡೈರೆಕ್ಟರ್ 2, ಟೆಕ್ನಿಕಲ್ ಆಫೀಸರ್ 3, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಸಿಎಸ್‌ಜಿ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ಅರ್ಜಿ ಹಾಕಿ ಸಿಎಸ್‌ಜಿ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ಅರ್ಜಿ ಹಾಕಿ

ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು, ಸ್ನಾತಕೋತ್ತರ ಪದವಿ ಪಡೆದವರು, ಎಂಸಿಎ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಶಿಕ್ಷಕರ ನೇಮಕಾತಿ; ಸಿಹಿ ಸುದ್ದಿ ಕೊಟ್ಟ ಸಚಿವ ಬಿ. ಸಿ. ನಾಗೇಶ್‌ ಶಿಕ್ಷಕರ ನೇಮಕಾತಿ; ಸಿಹಿ ಸುದ್ದಿ ಕೊಟ್ಟ ಸಚಿವ ಬಿ. ಸಿ. ನಾಗೇಶ್‌

UIDAI Recruitment Apply For 11 Post In Bengaluru

ಟೆಕ್ನಿಕಲ ಆಫೀಸರ್, ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್ ಹುದ್ದೆಗೆ ಯುಐಡಿಎಐ ನೇಮಕಾತಿ ನಿಯಮಗಳ ಅನ್ವಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

50 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಬಿಎಂಆರ್‌ಸಿಎಲ್ 50 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಬಿಎಂಆರ್‌ಸಿಎಲ್

ಡೆಪ್ಯೂಟಿ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಫ್ಟ್‌ವೇರ್ ಡೆವಲಪ್‌ಮೆಂಟ್, ಡೇಟಾಬೇಸ್, ನೆಟ್‌ವರ್ಕ್ ಸೆಕ್ಯೂರಿಟಿ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಯುಐಡಿಎಐ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷಗಳು. 24/1/2022ಕ್ಕೆ ಅನ್ವಯವಾಗುವಂತೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ನಿಗದಿತ ದಾಖಲೆಗಳನ್ನು ಲಗತ್ತಿಸಿ, ಸ್ವಯಂ ದೃಢೀಕರಣ ಮಾಡಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಮಾಡಲು ವಿಳಾಸ; Unique Identification Authority of India (UIDAI), Aadhaar Complex, NTI Layout, Tata Nagar, Kodigehalli, Technology Centre, Bengaluru 560092. (ಅರ್ಜಿಗಳನ್ನು ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬಹುದಾಗಿದೆ).

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ uidai.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಸೇನಾ ನೇಮಕಾತಿ; ಯುನಿಟ್ ಹೆಡ್ಕ್ವಾರ್ಟರ್ ಕೋಟಾ ನೇಮಕಾತಿ ರ‍್ಯಾಲಿಯು 2022ರ ಜನವರಿ 17 ರಿಂದ 22ರ ತನಕ ಗೋವಾದಲ್ಲಿ ನಡೆಯಲಿದೆ. ಅರ್ಹ ಸೈನಿಕರು, ಮಾಜಿ ಸೈನಿಕರು ಹಾಗೂ ಅವರ ಅವಲಂಭಿತ ಕುಟುಂಬದವರು ಈ ರ‍್ಯಾಲಿಯಲ್ಲಿ ಪಾಲ್ಗೊಳ್ಳಬಹುದು.

ಯುನಿಟ್ ಹೆಡ್ಕ್ವಾರ್ಟರ್ ಕೋಟಾ ನೇಮಕಾತಿ ರ‍್ಯಾಲಿಯಲ್ಲಿ ಸೈನಿಕರು/ ಮಾಜಿ ಸೈನಿಕರು/ ವಿಧವೆ/ ಯುದ್ಧ ವಿಧವೆ ಮತ್ತು ಸೈನಿಕರ ಸಹೋದರ/ ಮಾಜಿ ಸೈನಿಕರ ಘಟಕದ ಪ್ರಧಾನ ಕೋಟಾ ನೇಮಕಾತಿ ರ‍್ಯಾಲಿಯನ್ನು ಗೋವಾದ 2-ಸಿಂಗನಲ್ ತರಬೇತಿ ಕೇಂದ್ರದಲ್ಲಿ 2022ರ ಜನವರಿ 17 ರಿಂದ 22 ರವರೆಗೆ ನಡೆಸಲಾಗುತ್ತದೆ.

ಈ ನೇಮಕಾತಿ ರ‍್ಯಾಲಿಯಲ್ಲಿ ಸೈನಿಕ ಹುದ್ದೆಗಳಾದ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟ್ರೇಡ್ಸ್ಮೆನ್ (ಚಿಫ್, ಸ್ಟೀವರ್ಡ್, ಡ್ರೆಸ್ಸರ್ (ಯುನಿಟ್), ಹೌಸ್ ಕೀಪರ್ ಮತ್ತು ಮೆಸ್ ಕೀಪರ್) ಹುದ್ದೆಗಳ ನೇಮಕಾತಿ ನಡೆಯಲಿದೆ.

ಆಯಾ ಕಾರ್ಪ್ಸ್ ತಂಡದ ಕಮಾಂಡಿಂಗ್ ಆಫೀಸರ್ ಹುದ್ದೆಗಳನ್ನು ಅತ್ಯುತ್ತಮ ಕ್ರೀಡಾ ಪಟುಗಳ ವರ್ಗಗಳಿಗೆ ಮೀಸಲಿಡಲಾಗಿದೆ. ರ‍್ಯಾಲಿಯಲ್ಲಿ ಉತ್ತರ ಕರ್ನಾಟಕ ಭಾಗದ ಆಭ್ಯರ್ಥಿಗಳು ನೇಮಕಾತಿ ಸಂಬಂಧಿಸಿದ ದಾಖಲೆಗಳೊಂದಿಗೆ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ; ದಾವಣಗೆರೆ ನಗರದ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕೇಂದ್ರದಲ್ಲಿ ಒಂದು ವರ್ಷದ ಅವಧಿಗೆ ಅತಿಥಿ ಉಪನ್ಯಾಸಕರಾಗಿ ನೇಮಕಗೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 21 ಕೊನೆಯ ದಿನವಾಗಿದೆ.

ಬಿ.ಇ/ ಎಂ.ಟೆಕ್‍ನ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕನಿಷ್ಠ ಎರಡು ವರ್ಷಗಳ ಅನುಭವವುಳ್ಳ ಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು.

Recommended Video

ರೋಹಿತ್ ಆಡೋಕಾಗಲ್ಲ,ಕೊಹ್ಲಿಗೆ ಬೇಕಾಗಿಲ್ಲ ಅಂದ್ಮೇಲೆ ರಾಹುಲ್ ನಾಯಕನಾಗೋದು ಪಕ್ಕಾ!! | Oneindia Kannada

ಅರ್ಜಿಯನ್ನು ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ 22 ಸಿ&ಡಿ, ಕೆಐಏಡಿಬಿ ಇಂಡಸ್ಟ್ರೀಯಲ್ ಏರಿಯಾ, ಹರ್ಲಾಪುರ, ಹರಿಹರ-577601 ದೂರವಾಣಿ ಸಂಖ್ಯೆ 08192-243937 ಅನ್ನು ಇವರಿಗೆ ಸಲ್ಲಿಸಬೇಕು.

English summary
Unique Identification Authority of India (UIDAI) invited applications for deputy director, assistant director post. Candidates can apply till January 24,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X