UIIC Recruitment 2024: ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ, ಭರ್ಜರಿ ವೇತನ, ನೇಮಕಾತಿ ವಿವರ
ಬೆಂಗಳೂರು, ಡಿಸೆಂಬರ್ 18: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (UIIC) ತನ್ನಲ್ಲಿ ಖಾಲಿ ಇರುವ ನೂರಾರು ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಈ ಅವಕಾಶವನ್ನು ಸುದುಪಯೋಗ ಮಾಡಿಕೊಳ್ಳಬೇಕು. ಮುಂದಿನ ವರ್ಷ ಜನವರಿ 6ರೊಳಗೆ ಅರ್ಜಿ ಸಲ್ಲಿಸಬೇಕು.
ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (UIIC) ನಲ್ಲಿ ಒಟ್ಟು 300 ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆ ದಿನದವರೆಗೂ ಕಾಯದೇ ಈ ಕೂಡಲೇ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆಗೂ ಮೊದಲು ಅಭ್ಯರ್ಥಿಗಳು ಇಲ್ಲಿ ಕೊಡಲಾಗಿರುವ ನೇಮಕಾತಿ, ವೇತನ, ವಯಸ್ಸಿನ ಮಿತಿ ಸೇರಿದಂತೆ ನೇಮಕಾತಿಯ ಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (UIIC)
ಹುದ್ದೆ ಹೆಸರು: ಅಸಿಸ್ಟೆಂಟ್ ಹುದ್ದೆಗಳು
ಖಾಲಿ ಹುದ್ದೆ ಸಂಖ್ಯೆ: 300
ಮಾಸಿಕ ವೇತನ: 22,405 ನಿಂದ 62,265 ರೂಪಾಯಿ
ಪೋಸ್ಟಿಂಗ್: ಭಾರತದಲ್ಲಿ ಎಲ್ಲಿಯಾದರೂ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 2024 ಜನವರಿ 06
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸಲಯ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯ ಕಡ್ಡಾಯವಾಗಿ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕು ಎಂದು ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯೋಮಿತಿ ಮಾಹಿತಿ
ಅರ್ಹ ಅಭ್ಯರ್ಥಿಗಳ ವಯಸ್ಸು ಇದೇ ವರ್ಷ 2023ರ ಸೆಪ್ಟೆಂಬರ್ 30ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು ಎಂದು ಹೇಳಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು ಹಾಗೂ PwBD ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ ಎಂದು ಕಂಪನಿ ತಿಳಿಸಿದೆ.
ಅರ್ಜಿ ಶುಲ್ಕ ಎಷ್ಟಿದೆ?
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ,PwBD/ಕಂಪನಿ ಅಭ್ಯರ್ಥಿಗಳ ಖಾಯಂ ಉದ್ಯೋಗಿಗಳಿಗೆ ರೂ.250 ರೂಪಾಯಿ ಅರ್ಜಿ ಶುಲ್ಕ ಇದ್ದು, ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 1000 ರೂಪಾಯಿ ಇದೆ. ಈ ಹಣವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿದೆ.
ಆಯ್ಕೆ ಪ್ರಕ್ರಿಯೆ-ವೇತನ ಮಾಹಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಆನ್‌ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ನಂತರ ನೇರ ಸಂದರ್ಶನ ನಡೆಸಲಾಗುವುದು. ಇನ್ನೂ ಇಲ್ಲಿ ಆಯ್ಕೆ ಆಗುವವರಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುವುದು. ಅವರಿಗೆ ಮಾಸಿಕವಾಗಿ 22,405-62,265 ರೂಪಾಯಿ ವೇತನ ಸಿಗಲಿದೆ.
ಆಸಕ್ತು ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಸೂಕ್ತ ದಾಖಲೆಗಳ ಸಹಿತ ಭರ್ತಿ ಮಾಡಿದ ಅರ್ಜಿಯನ್ನು ಆನ್‌ಲೈನ್ ಮೂಲಕ (https://uiic.co.in/en/home) ಭರ್ತಿ ಮಾಡಬೇಕು. ಈ ಸಂಬಂಧ ಇಲ್ಲಿ ಕೊಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಹೆಚ್ಚಿನ ಮಾಹಿತಿ ಇಲ್ಲಿ ತಿಳಿಯಬಹುದು.
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ ಆರಂಭವಾಗಿದ್ದು- ಡಿಸೆಂಬರ್ 16 ರಂದು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ- ಮುಂದಿನ ವರ್ಷ 2023 ಜನವರಿ 6.












Click it and Unblock the Notifications