ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

110 ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

|
Google Oneindia Kannada News

ಬೆಂಗಳೂರು, ಮೇ 02 : ಕೇಂದ್ರ ಲೋಕಸೇವಾ ಆಯೋಗ ಭಾರತ ಅರಣ್ಯ ಸೇವೆ (ಐಎಫ್‌ಎಸ್)ಯಲ್ಲಿ 110 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 07-08-2016 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆಗಳು ನಡೆಯಲಿವೆ. [KPSC ನೇಮಕಾತಿ : ಅರ್ಜಿ ಸಲ್ಲಿಸಲು ಮೇ 5 ಕೊನೆ ದಿನ]

upsc

ಒಟ್ಟು 110 ಹುದ್ದೆಗಳಿದ್ದು ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 21 ವರ್ಷ. ಗರಿಷ್ಟ 32 ವರ್ಷಗಳು. ಎಸ್.ಸಿ., ಎಸ್.ಟಿ. ಅಭ್ಯರ್ಥಿಗಳಿಗೆ 5, ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇದೆ. [72 ವಲಯ ಅರಣ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ]

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ 100 ರೂ., ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ http://upsconline.nic.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

* ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಜಿಲ್ಲಾ ಕೇಂದ್ರಗಳಲ್ಲಿ ಸ್ಟ್ರಿಂಜರ್‌ಗಳಾಗಿ ಕಾರ್ಯನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೇ 13, 2016 ಅರ್ಜಿ ಸಲ್ಲಿಸಲು ಕೊನೆಯ ದಿನ. [ವಿವರಗಳು ಇಲ್ಲಿವೆ]

English summary
Union Public Service Commission ( UPSC) invited online applications for the Indian Forest Services Examination 2016. Candidates may apply online through UPSC website www.upsconline.nic.in before May 27th, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X