1,129 ಹುದ್ದೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ
ಬೆಂಗಳೂರು, ಜೂ. 01 : ಕೇಂದ್ರ ಲೋಕಸೇವಾ ಆಯೋಗವು ಐಎಎಸ್, ಐಪಿಎಸ್, ಐಎಫ್ಎಸ್, ಐಆರ್‌ಎಸ್ ಸೇರಿದಂತೆ 1,129 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 19, 2015
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಪದವಿ ಪಡೆದಿರಬೇಕು. ಅರಣ್ಯ ಸೇವಾ ಪರೀಕ್ಷೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ಮತ್ತು ಇಂಜಿನಿಯರಿಂಗ್ ಪದವೀಧರರು ಮಾತ್ರ ಅರ್ಹರು ಪ್ರಸಕ್ತ ಸಾಲಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವವರೂ ಅರ್ಜಿ ಸಲ್ಲಿಸಲು ಅವಕಾಶವಿದೆ. [ನೇಮಕಾತಿ ಆದೇಶ ಓದಿ]

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1-8-2015ಕ್ಕೆ 21 ವರ್ಷ ಪೂರ್ಣಗೊಂಡಿರಬೇಕು ಮತ್ತು 32 ವರ್ಷದೊಳಗಿರಬೇಕು. ಪ.ಜಾ/ಪ.ಪಂಗಡಕ್ಕೆ 5 ವರ್ಷ, ಓಬಿಸಿಗೆ 3 ವರ್ಷಗಳ ರಿಯಾಯಿತಿ ಇದೆ. [ಅರ್ಜಿ ಸಲ್ಲಿಸಲು ವಿಳಾಸ]
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 100 ರೂ., ಪ.ಜಾ/ಪ.ಪಂ/ಮಾಜಿ ಸೈನಿಕರಿಗೆ/ಮಹಿಳೆಯರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ಆನಲೈನ್ ಮುಖಾಂತರ ಮಾತ್ರ ಜೂನ್ 19ರ ರಾತ್ರಿ 11.59 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ಇವರಿಗೆ ಕರೆ ಮಾಡಬಹುದಾಗಿದೆ. ದೂರವಾಣಿ ಸಂಖ್ಯೆಗಳು 0821-2516844/ 9449686641.












Click it and Unblock the Notifications