ಐಎಎಸ್, ಐಪಿಎಸ್ ಆಕಾಂಕ್ಷಿಗಳಿಗೆ ಶುಭಸುದ್ದಿ: ಯುಪಿಎಸ್‌ಸಿಗೆ ನಡೆಯಲಿದೆ ನೇಮಕಾತಿ
ನವದೆಹಲಿ, ಫೆಬ್ರವರಿ 20: ಕೇಂದ್ರ ನಾಗರಿಕ ಸೇವಾ ಆಯೋಗದಿಂದ ಉದ್ಯೋಗಾಕಾಂಕ್ಷಿಗಳಿಗೆ ಒಳ್ಳೆಯ ಸುದ್ದಿ ದೊರೆತಿದೆ. 2014ರ ಬಳಿಕ ಇದೇ ಮೊದಲ ಬಾರಿಗೆ ಅತ್ಯಧಿಕ ನೇಮಕಾತಿಗೆ ಯುಪಿಎಸ್‌ಸಿ ಮುಂದಾಗಿದೆ.
ದೇಶದ ಪ್ರತಿಷ್ಠಿತ ನಾಗರಿಕ ಸೇವೆಗಳಾದ ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್)ಗಳಿಗೆ ನೇಮಕಾತಿ ನಡೆಸಲು ಪರೀಕ್ಷೆಗಳು ನಡೆಯಲಿವೆ.
ಪ್ರಸಕ್ತ ವರ್ಷ 896 ನಾಗರಿಕ ಸೇವಾ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 2014ರಲ್ಲಿ 1,291 ಖಾಲಿ ಹುದ್ದೆಗಳಿಗೆ ಯುಪಿಎಸ್‌ಸಿ ಪರೀಕ್ಷೆ ನಡೆಸಿತ್ತು. 2018ರಲ್ಲಿ 783ಕ್ಕೂ ಅಧಿಕ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಕಳೆದ ಕೆಲವು ವರ್ಷಗಳಿಂದ ಯುಪಿಎಸ್‌ಸಿ 180 ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ.

ನೇಮಕಾತಿ ಸಂಬಂಧ ಯುಪಿಎಸ್‌ಸಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು 2019ರ ಮಾರ್ಚ್ 18 ಕೊನೆಯ ದಿನವಾಗಿದೆ.
ನರೇಂದ್ರ ಮೋದಿ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೆ ಉದ್ಯೋಗದಲ್ಲಿ ಶೇ 10ರ ಮೀಸಲಾತಿ ನೀಡುವ ನಿಯಮವು ಇಲ್ಲಿ ಅನ್ವಯವಾಗಲಿದೆ. ಆನ್‌ಲೈನ್‌ನಲ್ಲಿ ಸವಿವರವಾದ ಅರ್ಜಿಯೊಂದಿಗೆ ಆದಾಯ ಮತ್ತು ಆಸ್ತಿಯ ಪ್ರಮಾಣಪತ್ರಗಳನ್ನು ಆಕಾಂಕ್ಷಿಗಳು ಒದಗಿಸಬೇಕು.
ಪ್ರತಿವರ್ಷ ಯುಪಿಎಸ್‌ಸಿ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಕೇಡರ್ ನಿಯಂತ್ರಣ ಪ್ರಾಧಿಕಾರಗಳು ತಮ್ಮ ಅಗತ್ಯಗಳಲ್ಲಿ ಬದಲಾವಣೆಗಳನ್ನು ತಂದರೆ ಖಾಲಿ ಇರುವ ಹುದ್ದೆಗಳಲ್ಲಿಯೂ ಬದಲಾವಣೆಗಳಾಗಬಹುದು ಎಂದು ಅಧಿಸೋಚನೆಯಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಸುಮಾರು 1,500 ಐಎಎಸ್ ಅಧಿಕಾರಿಗಳ ಕೊರತೆ ಇದೆ. ಅದರಲ್ಲಿಯೂ ಅನೇಕ ಮಹತ್ವದ ಹುದ್ದೆಗಳು ಖಾಲಿ ಇವೆ. ಈ ಬಾರಿ ನೇಮಕಾತಿಯಲ್ಲಿ ಏರಿಕೆ ಮಾಡಿದ್ದರೂ ಸರ್ಕಾರದಲ್ಲಿ ಖಾಲಿ ಇರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎನ್ನಲಾಗದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications