7 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ
ಬೆಂಗಳೂರು, ಡಿಸೆಂಬರ್ 06 : ಕೇಂದ್ರ ಲೋಕಸೇವಾ ಆಯೋಗ 7 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 20, 2018 ಕೊನೆಯ ದಿನವಾಗಿದೆ.
ಯುಪಿಎಸ್‌ಸಿ Senior Developers, Software Designer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್ ಇನ್ ಇನ್‌ಫರ್‌ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್ ಅಥವ ಎಂಸಿಎ (ರೆಗ್ಯುಲರ್ ಕೋರ್ಸ್) ಅನ್ನು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು.

ಯುಪಿಎಸ್‌ಸಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿ ಮಾಡಿಲ್ಲ.
ವೇತನ ಶ್ರೇಣಿ : Senior Developers 45000 ಪ್ರತಿ ತಿಂಗಳು. Software Designer 75000 ಪ್ರತಿ ತಿಂಗಳು.
ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications