120 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಯುಪಿಎಸ್‌ಸಿ
ಬೆಂಗಳೂರು, ಏಪ್ರಿಲ್ 23 : ಯುಪಿಎಸ್‌ಸಿ 120 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಮೇ 3, 2018 ಅಂತಿಮ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ ಸಹಾಯಕ ಜಿಯೋಲಜಿಸ್ಟ್, ಡ್ರಗ್ ಇನ್ಸ್‌ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.
ವಿದ್ಯಾರ್ಹತೆ : ಸಹಾಯಕ ಜಿಯೋಲಜಿಸ್ಟ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ಜಿಯೋಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ಡಿಗ್ರಿ ಇನ್ ಫಾರ್ಮಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 3/5/2018ಕ್ಕೆ ಅನ್ವಯವಾಗುವಂತೆ. ಒಟ್ಟು 120 ಹುದ್ದೆಗಳಿದ್ದು, ವೇತನ ಶ್ರೇಣಿ ಲೆವಲ್ - 8 (7ನೇ ವೇತನ ಆಯೋಗದ ಶಿಫಾರಸಿನಂತೆ).
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಎಸ್‌ಬಿಐ ಬ್ರಾಂಚ್‌ನಲ್ಲಿ ನಗದು ರೂಪದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು ಅಥವ ಡೆಬಿಟ್, ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ.
ಎಸ್‌ಸಿ/ಎಸ್‌ಟಿ/ಪಿಎಚ್/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 25 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications