ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಬೆಂಗಳೂರು, ಜುಲೈ 03 : ಕೇಂದ್ರ ಲೋಕಸೇವಾ ಆಯೋಗ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜುಲೈ 12, 2018 ಕೊನೆಯ ದಿನವಾಗಿದೆ.

ಸಿವಿಲ್ ಇಂಜಿನಿಯರಿಂಗ್ ಮತ್ತು ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ವಿಭಾಗದಲ್ಲಿ ಉಪನ್ಯಾಸಕರ ಹುದ್ದೆಗಳನ್ನು ಯುಪಿಎಸ್‌ಸಿ ಭರ್ತಿ ಮಾಡುತ್ತಿದೆ. ಒಟ್ಟು 13 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿಯರಿಂಗ್, ಟೆಕ್ನಾಲಜಿ ಇನ್ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ನಿಗದಿಗೊಳಿಸಲಾಗಿದೆ. ಅಭ್ಯರ್ಥಿಗಳು ಪ್ರಥಮ ದರ್ಜೆಯ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವ ಸಂಸ್ಥೆಯಿಂದ ಉತ್ತೀರ್ಣಗೊಂಡಿರಬೇಕು.

UPSC recruitment 2018 : Apply for 13 Lecturer Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ವಿದ್ಯಾರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ವೇತನ ಶ್ರೇಣಿ 15,600 ರಿಂದ 39,100 ಪ್ರತಿ ತಿಂಗಳು.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು 25 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕಗಳು ಇರುವುದಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+