13 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ
ಬೆಂಗಳೂರು, ಸೆಪ್ಟೆಂಬರ್ 28 : ಯುಪಿಎಸ್‌ಸಿ 13 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 11 ಅಕ್ಟೋಬರ್ 2018 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) Administrative Officer, Lecturer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
Administrative Officer ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

Lecturer ಹುದ್ದೆಗ ಅರ್ಜಿ ಸಲ್ಲಿಸುವವರು ಕೆಮಿಕಲ್, ಸಿಬಿಎಲ್ ಇಂಜಿನಿಯರಿಂಗ್, ಇನ್‌ಫರ್‌ಮೇಶನ್ ಟೆಕ್ನಾಲಜಿ, Applied Mechanics ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲಿ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವೇತನ ಶ್ರೇಣಿ 15600-39100 ಪ್ರತಿ ತಿಂಗಳು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಟಿ/ಎಸ್‌ಸಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications