16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಬೆಂಗಳೂರು, ಮಾರ್ಚ್ 14 : ಯುಪಿಎಸ್‌ಸಿ 16 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 29 ಮಾರ್ಚ್ 2018 ಕೊನೆಯ ದಿನವಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ನಗರದಲ್ಲಿ ಕೆಲಸ ಮಾಡಬೇಕಿದೆ. ಕೇಂದ್ರ ಲೋಕಸೇವಾ ಆಯೋಗ 16 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದರಲ್ಲಿ 5 ಲೀಗಲ್ ಆಫಿಸರ್, 4 ಪಬ್ಲಿಕ್ ಪ್ರಾಸಿಕ್ಯೂಟರ್ ಸೇರಿದಂತೆ ವಿವಿಧ ಹುದ್ದೆಗಳಿವೆ.

ಲೀಗಲ್ ಆಫಿಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಂತರಾಷ್ಟ್ರೀಯ ಕಾನೂನು/ಅಂತರಾಷ್ಟ್ರೀಯ ಸಂಬಂಧ ವಿಷಯದಲ್ಲಿ ಮಾನ್ಯತೆ ಪಡೆದ ವಿವಿಯಿಂದ ಕೋರ್ಸ್ ಪೂರ್ಣಗೊಳಿಸಿರಬೇಕು.

UPSC recruitment 2018 : Apply for 16 various vacancies.

ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷ, ಲೀಗಲ್ ಆಫಿಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ವೇತನ ಶ್ರೇಣಿ : ಪಬ್ಲಿಕ್ ಪ್ರಾಸಿಕ್ಯೂಟರ್ 56,100 ರಿಂದ 177500 ರೂ.ಗಳು. ಲೀಗಲ್ ಅಡೈಸರ್ ಹುದ್ದೆಗೆ 67,700 ರಿಂದ 208700 ರೂ.ಗಳು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+