414 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ
ಬೆಂಗಳೂರು, ಆಗಸ್ಟ್ 22 : ಯುಪಿಎಸ್‌ಸಿ 414 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 3, 2018 ಕೊನೆಯ ದಿನವಾಗಿದೆ.
ಯುಪಿಎಸ್‌ಸಿ Combined Defence Service Examination ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ವಿದ್ಯಾರ್ಹತೆ ವಿವರ
* I.M.A. and Officers Training Academy ಹುದ್ದೆಗೆ ಪದವಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

* For Indian Naval Academy ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
* For Air Force Academy ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಜೊತೆಗೆ ಭೌತಶಾಸ್ತ್ರ ಮತ್ತು ಗಣಿತದಲ್ಲಿ ಪಿಯುಸಿ ಅಥವ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
ವಯೋಮಿತಿ : I.M.A. ಹುದ್ದೆಗೆ 1995ರ ಜುಲೈ 2ರ ನಂತರ 1 ಜುಲೈ 2000ದೊಳಗೆ ಜನಿಸಿದ ಅವಿವಾಹಿತ ಪುರುಷರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇಂಡಿಯನ್ ನ್ಯಾವಿ ಅಕಾಡಮಿ 2 ಜುಲೈ 1995 ರಿಂದ 1 ಜುಲೈ 2000ದೊಳಗೆ ಜನಿಸಿದ ಅವಿವಾಹಿತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications