60 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಯುಪಿಎಸ್‌ಸಿ
ಬೆಂಗಳೂರು, ನವೆಂಬರ್ 27 : ಕೇಂದ್ರ ಲೋಕಸೇವಾ ಆಯೋಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 13/12/2018 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಏರ್ ಸೇಫ್ಟಿ ಆಫೀಸರ್, ಅಸಿಸ್ಟೆಂಟ್ ಡೈರೆಕ್ಟರ್, ಸೈಂಟಿಸ್ಟ್ (ಬಿ), ಡೈಪ್ಯೂಟಿ ಡೈರೆಕ್ಟರ್ ಸೇರಿದಂತೆ 60 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಅನ್ವಯ ಲೆವೆಲ್ -10 ಮ್ಯಾಟ್ರಿಕ್ಸ್‌ನಂತೆ ವೇತನವನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 25 ರೂ., ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ಅಂಶಗಳು
* ಯುಪಿಎಸ್‌ಸಿ ನೇಮಕಾತಿ
* 60 ಹುದ್ದೆಗಳು
* 13/12/2018 ಅರ್ಜಿ ಸಲ್ಲಿಸಲು ಕೊನೆ ದಿನ
ವಿದ್ಯಾರ್ಹತೆ ಮತ್ತು ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications