84 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಬೆಂಗಳೂರು, ಅಕ್ಟೋಬರ್ 22 : ಯುಪಿಎಸ್‌ಸಿ 84 ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 1, 2018 ಕೊನೆಯ ದಿನವಾಗಿದೆ.

ಡೆಪ್ಯೂಟಿ ಆರ್ಕಿಟೆಕ್ಟ್‌, ಡೆಪ್ಯೂಟಿ ಡೈರೆಕ್ಟರ್ ಆಫ್ ಮೈನ್ಸ್ ಸೇಫ್ಟಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಡೆಪ್ಯೂಟಿ ಆರ್ಕಿಟೆಕ್ಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಆರ್ಕಿಟೆಕ್ಚರ್‌ನಲ್ಲಿ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಐಐಎ ಪರೀಕ್ಷೆ ಬರೆದು ಸದಸ್ಯರಾಗಿರಬೇಕು.

UPSC recruitment 2018 : Apply for 84 Various Vacancies

ಡೆಪ್ಯೂಟಿ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮೈನಿಂಗ್ ಇಂಜಿನಿಯರಿಂಗ್‌ನಲ್ಲಿ ಮಾನ್ಯತೆ ಪಡೆದ ಸಂಸ್ಥೆ ಅಥವ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ವಿವರ
* ಡೆಪ್ಯೂಟಿ ಆರ್ಕಿಟೆಕ್ಟ್‌ 35 ವರ್ಷ
* ಡೆಪ್ಯೂಟಿ ಡೈರೆಕ್ಟರ್ 40 ವರ್ಷ (ನವೆಂಬರ್ 1, 2018ಕ್ಕೆ ಅನ್ವಯವಾಗುವಂತೆ)

ವೇತನ ಶ್ರೇಣಿ : 15600 ರಿಂದ 39100 ಪ್ರತಿ ತಿಂಗಳು.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+