106 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ
ಬೆಂಗಳೂರು, ಮಾರ್ಚ್ 25 : ಯುಪಿಎಸ್‌ಸಿ 106 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 16/4/2019 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) Geologist, Geo Scientist ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 106 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಸ್ನಾತಕೋತ್ತರ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 32 ವರ್ಷಗಳು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಮಾ.20 ರಿಂದ ಏಪ್ರಿಲ್ 16, 2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications