ಯುಪಿಎಸ್‌ಸಿ ನೇಮಕಾತಿ; 153 ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 14 : ಕೇಂದ್ರ ಲೋಕಸೇವಾ ಆಯೋಗ 153 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/11/2019 ಕೊನೆಯ ದಿನವಾಗಿದೆ.
ಯುಪಿಎಸ್‌ಸಿ Examiner, Specialist, Senior Lecturer ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಕಾನೂನು ವಿಚಾರದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ, ಪಿಎಚ್‌ಡಿ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Examiner ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 30, Specialist (Pathology) ಹುದ್ದೆಗೆ 50,
Specialist ಹುದ್ದೆಗೆ 45, Senior Lecturer ಹುದ್ದೆಗೆ 53 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳು 25 ರೂ. ಶುಲ್ಕವನ್ನು ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications