ಯುಪಿಎಸ್‌ಸಿ ನೇಮಕಾತಿ: 415 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 08: ಕೇಂದ್ರ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 03 ಕೊನೆಯ ದಿನವಾಗಿದೆ.
ಯುಪಿಎಸ್‌ಸಿ 415 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದಕ್ಕಾಗಿ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿವೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಸಂಸ್ಥೆ ಹೆಸರು: Union Public Service Commission
ಹುದ್ದೆ ಹೆಸರು: NDA
ಒಟ್ಟು ಹುದ್ದೆ: 415
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 03, 2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಲಯದಿಂದ 12ನೇ ತರಗತಿ, 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ: ಮುಖ್ಯ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು(ಅವಿವಾಹಿತರು) 02 ಜನವರಿ 2001ರಿಂದ 01 ಜನವರಿ 2004ರೊಳಗೆ ಜನಿಸಿರಬೇಕು.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನ: 07.08.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03.09.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications