ಯುಪಿಎಸ್‌ಸಿ ನೇಮಕಾತಿ : 896 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 06 : ಕೇಂದ್ರ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/8/2019 ಕೊನೆಯ ದಿನವಾಗಿದೆ.
ಯುಪಿಎಸ್‌ಸಿ 896 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದಕ್ಕಾಗಿ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿವೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮುಖ್ಯ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 32 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 1 ಆಗಸ್ಟ್ 2019ಕ್ಕೆ ಅನ್ವಯವಾಗುವಂತೆ. ಈ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications