ಯುಪಿಎಸ್‌ಸಿ ನೇಮಕಾತಿ; 30 ಹುದ್ದೆಗಳ ಭರ್ತಿಗೆ ಅರ್ಜಿ ಹಾಕಿ
ಬೆಂಗಳೂರು, ಡಿಸೆಂಬರ್ 17 : ಕೇಂದ್ರ ಲೋಕಸೇವಾ ಆಯೋಗ 30 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 2/1/2020 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ ಎಕ್ಸ್‌ಟೆಕ್ಷನ್ ಆಫೀಸರ್, ಡೆಪ್ಯೂಟಿ ರಿಜಿಸ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸುವವರು ಕಾನೂನು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ರಿಂದ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ನೇಮಕಾತಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್ ಮೂಲಕ ಮಾತ್ರ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ವಿಕಲಚೇತನ/ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಇತರ ಅಭ್ಯರ್ಥಿಗಳು 25 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಪ್ರಮುಖ ಮಾಹಿತಿ
* ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ
* ಎಕ್ಸಟೆಂಷನ್ ಆಫೀಸರ್, ಡೆಪ್ಯೂಟಿ ರಿಜಿಸ್ಟರ್ ಹುದ್ದೆ
* 30 ಹುದ್ದೆಗಳು
* 2/1/2020 ಅರ್ಜಿ ಹಾಕಲು ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications